image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಲು ಮುಸ್ಲಿಂ ಸಂಘಟನೆಗಳ ಆಗ್ರಹ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಲು ಮುಸ್ಲಿಂ ಸಂಘಟನೆಗಳ ಆಗ್ರಹ

ಬೆಂಗಳೂರು : ​ಬೆಂಗಳೂರಿನಲ್ಲಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಕರ್ನಾಟಕ ಮುಸ್ಲಿಂ ಸಮಾವೇಶ'ದಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಸಮುದಾಯದ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿರುವ ಸಂಘಟನೆಗಳು, ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿರುವ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ-2020 ರೈತರು, ಮಾಂಸ ವ್ಯಾಪಾರಿಗಳು ಮತ್ತು ಸಾರಿಗೆ ವಲಯದವರ ಜೀವನೋಪಾಯಕ್ಕೆ ಮಾರಕವಾಗಿದೆ ಎಂದು ಸಮಾವೇಶದಲ್ಲಿ ಅಭಿಪ್ರಾಯಪಡಲಾಗಿದೆ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಆರೋಪಿಸಿರುವ ನಾಯಕರು, ಈ ಕಾನೂನು ನಕಲಿ ಗೋರಕ್ಷಕರಿಗೆ ಅಕ್ರಮವಾಗಿ ಸಾಗಾಟಗಾರರ ಮೇಲೆ ಹಲ್ಲೆ ನಡೆಸಲು ಮತ್ತು ಲೂಟಿ ಮಾಡಲು ಅವಕಾಶ ನೀಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆಯಂತೆ, ಈ ಜನವಿರೋಧಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಅಥವಾ ಸೂಕ್ತ ತಿದ್ದುಪಡಿ ತರಬೇಕು ಎಂದು ಒಟ್ಟು 10 ಪ್ರಮುಖ ಬೇಡಿಕೆಗಳ ಪಟ್ಟಿಯನ್ನು ಸರ್ಕಾರದ ಮುಂದಿಡಲಾಗಿದೆ ಎಂದು ವರದಿಯಾಗಿದೆ.

Category
ಕರಾವಳಿ ತರಂಗಿಣಿ