image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪಡಿತರ ಚೀಟಿ ರದ್ದು ಕ್ರಮ ಮರುಪರಿಶೀಲನೆ ಹಾಗೂ ಕಚೇರಿ ಸ್ಥಳಾಂತರಕ್ಕೆ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಮನವಿ

ಪಡಿತರ ಚೀಟಿ ರದ್ದು ಕ್ರಮ ಮರುಪರಿಶೀಲನೆ ಹಾಗೂ ಕಚೇರಿ ಸ್ಥಳಾಂತರಕ್ಕೆ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಮನವಿ

ಬೆಂಗಳೂರು : ​ಬೆಂಗಳೂರಿನ ಆಹಾರ ನಿಗಮದ ಕಚೇರಿಯಲ್ಲಿ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಶ್ರೀ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ, ಶಿವಮೊಗ್ಗ ನಗರಕ್ಕೆ ಸಂಬಂಧಿಸಿದ ಪ್ರಮುಖ ಸಾರ್ವಜನಿಕ ಸಮಸ್ಯೆಗಳ ಕುರಿತು ಮಹತ್ವದ ಮನವಿಯೊಂದನ್ನು ಸಲ್ಲಿಸಲಾಯಿತು. ಶಿವಮೊಗ್ಗ ನಗರದಲ್ಲಿ ವಾಸವಾಗಿರುವ ಸುಮಾರು 5000ಕ್ಕೂ ಅಧಿಕ ಬಡ ಕೂಲಿ ಕಾರ್ಮಿಕರ ಪಡಿತರ ಚೀಟಿಗಳನ್ನು (ರೇಷನ್ ಕಾರ್ಡ್) ರದ್ದುಪಡಿಸಿರುವ ಕ್ರಮವನ್ನು ತಕ್ಷಣವೇ ಪುನರ್ ಪರಿಶೀಲಿಸಬೇಕು ಎಂದು ಸಚಿವರಿಗೆ ಒತ್ತಾಯಿಸಲಾಯಿತು. ಇದರೊಂದಿಗೆ, ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಗೋಪಾಲಗೌಡ ಬಡಾವಣೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರ ಕಚೇರಿಗೆ ಸಾರ್ವಜನಿಕರು ಭೇಟಿ ನೀಡಲು ಯಾವುದೇ ರೀತಿಯ ಸೂಕ್ತ ಬಸ್ ಸಂಪರ್ಕ ಇಲ್ಲದಿರುವುದರಿಂದ ದಿನನಿತ್ಯ ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂಬುದನ್ನು ಸಚಿವರ ಗಮನಕ್ಕೆ ತರಲಾಯಿತು.

​ಆದ್ದರಿಂದ, ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಸದರಿ ಕಚೇರಿಯನ್ನು ಶಿವಮೊಗ್ಗ ನಗರದ ವಿನೋಬನಗರದಲ್ಲಿ ಉತ್ತಮ ಬಸ್ ಸಂಪರ್ಕ ವ್ಯವಸ್ಥೆ ಹೊಂದಿರುವ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ವಾಣಿಜ್ಯ ಸಂಕೀರ್ಣದಲ್ಲಿ ಖಾಲಿ ಇರುವ ಹಳೆ ಸಬ್ ರಿಜಿಸ್ಟರ್ ಕಚೇರಿಗೆ ತಕ್ಷಣವೇ ಸ್ಥಳಾಂತರಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಯಿತು. ಮನವಿಯನ್ನು ಅತ್ಯಂತ ಆಸ್ಥೆಯಿಂದ ಆಲಿಸಿ, ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಬಡವರ ಅನುಕೂಲಕ್ಕಾಗಿ ಈ ಎರಡು ಪ್ರಮುಖ ಬೇಡಿಕೆಗಳ ಕುರಿತು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂಬ ದೃಢ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಕಾವೇರಿ ಹ್ಯಾಂಡ್ ಲೂಮ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಗಣೇಶ್ ರವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ