image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಆರ್‌ಟಿಒ ಚೆಕ್ ಪೋಸ್ಟ್ ಮೇಲೆ ರಾಜ್ಯಾದ್ಯಂತ ದಾಳಿ ಮಾಡಿದ ಲೋಕಾಯುಕ್ತ

ಆರ್‌ಟಿಒ ಚೆಕ್ ಪೋಸ್ಟ್ ಮೇಲೆ ರಾಜ್ಯಾದ್ಯಂತ ದಾಳಿ ಮಾಡಿದ ಲೋಕಾಯುಕ್ತ

ಬೆಳಗಾವಿ : ಲೋಕಾಯುಕ್ತ ಎಸ್‌ಪಿ ಹನುಮಂತರಾಯ ಅವರ ನೇತೃತ್ವದ ಲೋಕಾಯುಕ್ತ ಸಿಬ್ಬಂದಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ಬಳಿಯ ಚೆಕ್ ಪೋಸ್ಟ್ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಧಿಕಾರಿಗಳು ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಸುಮಾರು ಆರು ಜನ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ.

ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್‌ಟಿಒ ಚೆಕ್‌ ಪೋಸ್ಟ್ ಮೇಲೆ ಮಧ್ಯಾರಾತ್ರಿ 2 ಗಂಟೆಗೆ ದಾಳಿ ನಡೆಸಿದ ಎಸ್ಪಿ ಸಿದ್ದರಾಜು ನೇತೃತ್ವದ ಲೋಕಾಯುಕ್ತ ತಂಡ ಪರಿಶೀಲನೆ ನಡೆಸುತ್ತಿದೆ. ಡಿವೈಎಸ್ಪಿ ವಸಂತಕುಮಾರ್, ರಫೀಕ್, ಸಂಗಮೇಶ್ ಸೇರಿದಂತೆ ಇತರ ಅಧಿಕಾರಿಗಳು ಚೆಕ್ ಪೋಸ್ಟ್​ನಲ್ಲಿದ್ದ ಹೆಚ್ಚುವರಿ ಹಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಬಳ್ಳಾರಿ ಮತ್ತು ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಮಧ್ಯರಾತ್ರಿ ಆರ್‌ಟಿಒ ಚೆಕ್ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರೆಸಿದ್ದಾರೆ.

Category
ಕರಾವಳಿ ತರಂಗಿಣಿ