image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣಕ್ಕೆ ಕ್ಷಣಗಣನೆ: ಸಂಭಾವ್ಯ ಸಚಿವರ ರಾಜಕೀಯದಾಟ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣಕ್ಕೆ ಕ್ಷಣಗಣನೆ: ಸಂಭಾವ್ಯ ಸಚಿವರ ರಾಜಕೀಯದಾಟ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಸಿದ್ದರಾಮಯ್ಯನವರ ರಾಜೀನಾಮೆ ಸಲ್ಲಿಕೆಯಾದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದ್ದು, ಜೂನ್ 3ರಂದು ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ರಾಜಭವನದ ಗ್ಲಾಸ್ ಹೌಸ್‌ನಲ್ಲಿ ಸರಳವಾಗಿ ಜರುಗಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಗಳ ಜೊತೆಯಲ್ಲಿ ಸುಮಾರು 10 ರಿಂದ 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಿಂದ ಭಾರಿ ಕಸರತ್ತು ಆರಂಭವಾಗಿದೆ. ಈಗಾಗಲೇ ಹೈಕಮಾಂಡ್ ಮಟ್ಟದಲ್ಲಿ ಸಚಿವ ಸಂಪುಟ ರಚನೆ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿದ್ದು, ಆಕಾಂಕ್ಷಿಗಳು ನವದೆಹಲಿಗೆ ದೌಡಾಯಿಸಿ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ರಾಜೀನಾಮೆ ನೀಡಿದ ತಕ್ಷಣವೇ ದೆಹಲಿಗೆ ಪ್ರಯಾಣ ಬೆಳೆಸಿದ್ದು, ತಮ್ಮ ಆಪ್ತ ವಲಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಕೊಡಿಸುವ ನಿಟ್ಟಿನಲ್ಲಿ ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಹಿರಿಯ ಮತ್ತು ಪ್ರಭಾವಿ ನಾಯಕರ ಹೆಸರುಗಳು ಮುಂಚೂಣಿಯಲ್ಲಿದ್ದು, ಹೆಚ್‌.ಕೆ. ಪಾಟೀಲ್ (ಗದಗ), ಜಿ. ಪರಮೇಶ್ವರ್ (ಕೊರಟಗೆರೆ), ಎಂ.ಬಿ. ಪಾಟೀಲ್ (ಬಬಲೇಶ್ವರ), ಜಮೀರ್ ಅಹ್ಮದ್ ಖಾನ್ (ಚಾಮರಾಜಪೇಟೆ), ಸತೀಶ್ ಜಾರಕಿಹೊಳಿ (ಯಮಕನಮರಡಿ), ಯತೀಂದ್ರ ಸಿದ್ದರಾಮಯ್ಯ (ಎಂಎಲ್‌ಸಿ), ಈಶ್ವರ್ ಖಂಡ್ರೆ (ಭಾಲ್ಕಿ), ಎನ್‌.ಎ. ಹ್ಯಾರಿಸ್ (ಶಾಂತಿನಗರ), ರಾಮಲಿಂಗಾರೆಡ್ಡಿ (ಬಿಟಿಎಂ ಲೇಔಟ್), ಕೆ.ಹೆಚ್‌. ಮುನಿಯಪ್ಪ (ದೇವನಹಳ್ಳಿ) ಮತ್ತು ರೂಪಾ ಶಶಿಧರ (ಕೆಜಿಎಫ್‌) ಅವರ ಹೆಸರುಗಳು ಕೇಳಿಬರುತ್ತಿವೆ. ಇದರೊಂದಿಗೆ ಚಲುವರಾಯಸ್ವಾಮಿ (ನಾಗಮಂಗಲ), ಕೃಷ್ಣ ಬೈರೇಗೌಡ (ಬ್ಯಾಟರಾಯನಪುರ), ಪ್ರಿಯಾಂಕ್ ಖರ್ಗೆ (ಚಿತ್ತಾಪುರ), ಸಿ.ಎಸ್. ನಾಡಗೌಡ (ಮುದ್ದೇಬಿಹಾಳ), ಲಕ್ಷ್ಮೀ ಹೆಬ್ಬಾಳ್ಕರ್ (ಬೆಳಗಾವಿ ಗ್ರಾಮಾಂತರ), ಶಿವರಾಜ್ ತಂಗಡಗಿ (ಕನಕಗಿರಿ), ಸಲೀಂ ಅಹ್ಮದ್ (ಎಂಎಲ್‌ಸಿ), ಬೈರತಿ ಸುರೇಶ್ (ಹೆಬ್ಬಾಳ), ನಾಗೇಂದ್ರ (ಬಳ್ಳಾರಿ ಗ್ರಾಮಾಂತರ), ಯು.ಟಿ. ಖಾದರ್ (ಮಂಗಳೂರು), ನರೇಂದ್ರ ಸ್ವಾಮಿ (ಮಳವಳ್ಳಿ), ಬಿ. ಶಿವಣ್ಣ (ಆನೇಕಲ್), ಶ್ರೀನಿವಾಸ್ (تರೀಕೆರೆ), ದಿನೇಶ್ ಗುಂಡೂರಾವ್ (ಗಾಂಧಿನಗರ), ಬಸನಗೌಡ ಪಾಟೀಲ್ ಬಾದರ್ಲಿ (ಎಂಎಲ್‌ಸಿ), ರಘುಮೂರ್ತಿ (ಚಳ್ಳಕೆರೆ), ಶಿವಲಿಂಗೆಗೌಡ (ಅರಸೀಕೆರೆ), ಟಿ.ಡಿ. ರಾಜೇಗೌಡ (ಶೃಂಗೇರಿ), ಎಸ್‌.ಆರ್. ಶ್ರೀನಿವಾಸ್ (ಗುಬ್ಬಿ), ವಸಂತ್ ಕುಮಾರ್ (ಎಂಎಲ್‌ಸಿ), ಪ್ರಿಯಾಕೃಷ್ಣ (ಗೋವಿಂದರಾಜನಗರ) ಮತ್ತು ಕೃಷ್ಣಪ್ಪ (ವಿಜಯನಗರ) ಅವರುಗಳು ಕೂಡ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.

ಮತ್ತೊಂದೆಡೆ, ಸಿದ್ದರಾಮಯ್ಯ ಅವರ ರಾಜೀನಾಮೆ ಬಳಿಕ ರಾಜ್ಯದಲ್ಲಿ ಮೂರು ಅಥವಾ ನಾಲ್ಕು ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳನ್ನು ಸೃಷ್ಟಿಸುವ ಕುರಿತು ಪಕ್ಷದ ಒಳಗಡೆ ದೊಡ್ಡ ಮಟ್ಟದ ಚರ್ಚೆಗಳು ಆರಂಭವಾಗಿವೆ. ಡಿಸಿಎಂ ಸ್ಥಾನದ ರೇಸ್‌ನಲ್ಲಿ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್ ಖಾನ್, ಜಿ. ಪರಮೇಶ್ವರ್ ಮತ್ತು ಕೆ.ಎಚ್. ಮುನಿಯಪ್ಪ ಸೇರಿದಂತೆ ಪ್ರಮುಖ ಸಮುದಾಯಗಳ ನಾಯಕರ ಹೆಸರುಗಳು ಪರಿಶೀಲನೆಯಲ್ಲಿವೆ. ಆದರೆ, ಆಡಳಿತಾತ್ಮಕ ಹಿತದೃಷ್ಟಿಯಿಂದ ಯಾವುದೇ ಉಪಮುಖ್ಯಮಂತ್ರಿ ಸ್ಥಾನಗಳು ಬೇಡ ಎಂದು ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಕೆಪಿಸಿಸಿ ಘಟಕದ ಸಾರಥ್ಯವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಕುರಿತಾಗಿಯೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮನೆ ಮಾಡಿದೆ.

Category
ಕರಾವಳಿ ತರಂಗಿಣಿ