image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಆರು ಮಂದಿ ವಕೀಲರ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಆರು ಮಂದಿ ವಕೀಲರ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಆರು ಮಂದಿ ಪ್ರಮುಖ ವಕೀಲರ ಹೆಸರುಗಳನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಕೊಲಿಜಿಯಂ ಶಿಫಾರಸು ಮಾಡಿರುವ ವಕೀಲರ ಪಟ್ಟಿಯಲ್ಲಿ ರಾಘವೇಂದ್ರ ಸೀತಾರಾಂ ಶ್ರೀವಾತ್ಸವ್​, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗಾರಾವ್, ಟಿ.ಪಿ. ವಿವೇಕಾನಂದ, ಬಿ. ಪ್ರಮೋದ್ ಮತ್ತು ಹೆಚ್. ಶಾಂತಿಭೂಷಣ್ ಅವರ ಹೆಸರುಗಳು ಸೇರಿವೆ. ಈ ಪೈಕಿ ಹೆಚ್. ಶಾಂತಿಭೂಷಣ್ ಅವರು ಸದ್ಯ ಡೆಪ್ಯೂಟಿ ಸಾಲಿಸಿಟರ್ ಜನರಲ್ ಆಗಿ ಹೈಕೋರ್ಟ್‌ನಲ್ಲಿ ಕೇಂದ್ರ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇತ್ತೀಚೆಗಷ್ಟೇ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದ್ದು, ಅವರು ಸೋಮವಾರವಷ್ಟೇ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನಲ್ಲಿ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳು ಮಂಜೂರಾಗಿದ್ದು, ಈಗ ಕೊಲಿಜಿಯಂ ಶಿಫಾರಸು ಮಾಡಿರುವ ಆರು ಮಂದಿ ವಕೀಲರ ಹೆಸರುಗಳಿಗೆ ಕೇಂದ್ರ ಸರ್ಕಾರ ಅಸ್ತು ಎಂದರೆ, ಹೈಕೋರ್ಟ್‌ನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿಕೆಯಾಗಲಿದೆ. ಇದರಿಂದಾಗಿ ನ್ಯಾಯಾಲಯದ ಕಾರ್ಯಭಾರ ಮತ್ತು ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಹೆಚ್ಚಿನ ವೇಗ ದೊರೆಯುವ ನಿರೀಕ್ಷೆಯಿದೆ.

Category
ಕರಾವಳಿ ತರಂಗಿಣಿ