ಹುಬ್ಬಳ್ಳಿ: ನವರಾತ್ರಿ ವ್ರತವನ್ನು ಆಚರಿಸುವ ಪ್ರಯಾಣಿಕರು ಆಹಾರ ಮತ್ತು ಪಾನೀಯಗಳಿಗೆ ಸಂಬಂಧಿಸಿದಂತೆ ವಿವಿಧ ಸವಾಲುಗಳನ್ನು ಎದುರಿಸುತ್ತಾರೆ. ಈ ಸಮಸ್ಯೆಗಳನ್ನು ಪರಿಹರಿಸಲು, ಭಾರತೀಯ ರೈಲ್ವೆ ಮುಂಬೈ ಸೆಂಟ್ರಲ್, ದೆಹಲಿ ಜಂಕ್ಷನ್, ಸೂರತ್, ಜೈಪುರ, ಲಕ್ನೋ, ಪಾಟ್ನಾ ಜಂಕ್ಷನ್, ಲುಧಿಯಾನ, ದುರ್ಗ್, ಚೆನ್ನೈ ಸೆಂಟ್ರಲ್, ಸಿಕಂದರಾಬಾದ್, ಅಮರಾವತಿ, ಹೈದರಾಬಾದ್, ತಿರುಪತಿ, ಜಲಂಧರ್ ಸಿಟಿ, ಉದಯಪುರ ಸಿಟಿ, ಬೆಂಗಳೂರು ಕಂಟೋನ್ಮೆಂಟ್, ನವದೆಹಲಿ, ಥಾಣೆ, ಪುಣೆ, ಮಂಗಳೂರು ಸೆಂಟ್ರಲ್ ನಿಲ್ದಾಣ ಸೇರಿದಂತೆ 150ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ನವರಾತ್ರಿ ವಿಶೇಷ ಥಾಲಿಯನ್ನು ಪರಿಚಯಿಸಿದೆ.
ಭಾರತೀಯ ರೈಲ್ವೆ 150ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳಲ್ಲಿ ನವರಾತ್ರಿ ವ್ರತ ವಿಶೇಷ ಥಾಲಿ ಊಟ ಪ್ರಾರಂಭಿಸಿದೆ. ನವರಾತ್ರಿ ಹಬ್ಬದ ಋತುವಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಇದು ಅನುಕೂಲವಾಗಲಿದೆ. ಪ್ರಯಾಣಿಕರು ಈ ರುಚಿಕರವಾದ ನವರಾತ್ರಿ ವ್ರತ ವಿಶೇಷ ಥಾಲಿಯನ್ನು ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ, ಆನ್ಲೈನ್ ಮೂಲಕ ಆರ್ಡರ್ ಮಾಡಬಹುದು ಎಂದು ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.