image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪ್ರೊ. ಕೆ.ಎಸ್. ಭಗವಾನ್ ಹೇಳಿಕೆಗೆ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ: ನಾಲಿಗೆ ಕಿತ್ತು ಬಿಸಾಕುವುದಾಗಿ ಎಚ್ಚರಿಕೆ

ಪ್ರೊ. ಕೆ.ಎಸ್. ಭಗವಾನ್ ಹೇಳಿಕೆಗೆ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ: ನಾಲಿಗೆ ಕಿತ್ತು ಬಿಸಾಕುವುದಾಗಿ ಎಚ್ಚರಿಕೆ

ಧಾರವಾಡ : ಪ್ರೊ. ಕೆ.ಎಸ್. ಭಗವಾನ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಗುಡುಗಿದ್ದಾರೆ. ಪ್ರಭು ಶ್ರೀ ರಾಮಚಂದ್ರನ ಜನ್ಮದ ಬಗ್ಗೆ ಪದೇ ಪದೇ ವಿವಾದಾತ್ಮಕವಾಗಿ ಮಾತನಾಡುತ್ತಿರುವ ಭಗವಾನ್ ಅವರ ನಾಲಿಗೆ ಕಿತ್ತು ಬಿಸಾಕುತ್ತೇವೆ ಎಂದು ಎಚ್ಚರಿಕೆ ನೀಡಿರುವ ಮುತಾಲಿಕ್, ಹಿಂದೂಗಳ ನಂಬಿಕೆಗಳನ್ನು ಹಾಳು ಮಾಡುತ್ತಿರುವ ಭಗವಾನ್ ಅವರನ್ನು ಸರ್ಕಾರ ಕೂಡಲೇ ಜೈಲಿಗೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಭಗವಾನ್ ಅವರು ಹಿಂದೂ ದೇವರುಗಳು ಹಾಗೂ ಧಾರ್ಮಿಕ ನಂಬಿಕೆಗಳ ಬಗ್ಗೆ ನಿರಂತರವಾಗಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ ಮುತಾಲಿಕ್, "ಏ ಭಗವಾನ್, ನೀನು ನಿನ್ನ ತಂದೆಗೆ ಹುಟ್ಟಿದ್ದೀಯೆ ಎಂಬುದಕ್ಕೆ ಸಾಕ್ಷಿ ಇದ್ದರೆ ಕೊಡು. ಸಾವಿರಾರು ವರ್ಷಗಳಿಂದ ಶ್ರೀರಾಮನ ಪೂಜೆ ನಡೆಯುತ್ತಿರುವ ಈ ನೆಲದಲ್ಲಿ ಹುಟ್ಟಿ, ನೀನು ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದ್ದೀಯ" ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಭಗವಾನ್ ಒಮ್ಮೆ ಅಥವಾ ಎರಡು ಬಾರಿ ಅಲ್ಲ, ಪದೇ ಪದೇ ಶ್ರೀರಾಮ, ರಾಮಾಯಣ, ಹಿಂದೂ ಪರಂಪರೆ, ಹಿಂದೂ ದೇವರುಗಳು ಹಾಗೂ ಧಾರ್ಮಿಕ ಗ್ರಂಥಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದ್ದರಿಂದ ಭಗವಾನ್ ವಿರುದ್ಧ ಸರ್ಕಾರ ಕೂಡಲೇ ಸುಮೋಟೋ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದೇ ವೇಳೆ, ಭಗವಾನ್ ಈ ರೀತಿಯ ಹೇಳಿಕೆಗಳನ್ನು ನಿಲ್ಲಿಸದಿದ್ದರೆ ಶ್ರೀರಾಮ ಸೇನೆ ತಕ್ಕ ಉತ್ತರ ನೀಡಲು ಸಿದ್ಧವಾಗಿದೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಭಗವಾನ್ ಅವರು, "ನೀವು ಪೂಜೆ ಮಾಡುವ ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶ್ರೀರಾಮನ ತಂದೆ ದಶರಥ ಪುತ್ರಕಾಮೇಷ್ಟಿ ಯಾಗ ಮಾಡ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜತೆ ರಾತ್ರಿ ಮಲಗಬೇಕು. ಪುರೋಹಿತರ ಜತೆ ರಾಣಿ ರಾತ್ರಿ ಕಳೆದಿದ್ದಾಳೆ ಎಂದರೆ ಅರ್ಥ ಮಾಡಿಕೊಳ್ಳಿ. ಇದನ್ನು 'ರಾಮ ಮಂದಿರ ಏಕೆ ಬೇಕು' ಎನ್ನುವ ಪುಸ್ತಕದಲ್ಲಿ ನಾನು ಬರೆದಿದ್ದು, ವಾಲ್ಮೀಕಿ ರಾಮಾಯಣದಲ್ಲಿ ಇದರ ಬಗ್ಗೆ ಉಲ್ಲೇಖಿಸಿರುವುದಾಗಿ ಭಗವಾನ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯೇ ಸದ್ಯ ಶ್ರೀರಾಮ ಸೇನೆ ಮತ್ತು ಹಿಂದೂ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Category
ಕರಾವಳಿ ತರಂಗಿಣಿ