image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪಂಡರಾಪುರದ ಬಳಿ ಬಾವಿಗೆ ಬಿದ್ದ ಪಿಕಪ್ ವಾಹನ: 8 ಭಕ್ತರ ಸಾವು

ಪಂಡರಾಪುರದ ಬಳಿ ಬಾವಿಗೆ ಬಿದ್ದ ಪಿಕಪ್ ವಾಹನ: 8 ಭಕ್ತರ ಸಾವು

ಮಹಾರಾಷ್ಟ್ರ:  ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಾಲೂಕಿನ ತಂದುಳವಾಡಿ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಯಾತ್ರಾರ್ಥಿಗಳು ದುರ್ಮರಣವನ್ನಪ್ಪಿದ್ದಾರೆ. ಪಂಡರಾಪುರದ ರಂಜನಿ ಗ್ರಾಮದ ಒಂದೇ ಕುಟುಂಬದ 14 ಮಂದಿ ಸಿದ್ದನಾಥ ದೇವಾಲಯದ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ, ಅವರು ಪ್ರಯಾಣಿಸುತ್ತಿದ್ದ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿದ್ದ ಆಳವಾದ ಬಾವಿಗೆ ಬಿದ್ದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಾಹನದಲ್ಲಿದ್ದ ಇತರ ಆರು ಮಂದಿಯನ್ನು ಸ್ಥಳೀಯರು ರಕ್ಷಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

ರಸ್ತೆ ಬದಿಯಲ್ಲಿದ್ದ ಆ ಬಾವಿಗೆ ಯಾವುದೇ ರಕ್ಷಣಾ ಗೋಡೆ ಅಥವಾ ತಡೆಗೋಡೆ ಇಲ್ಲದಿರುವುದೇ ಈ ದುರಂತಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬಾವಿಯ ಅಪಾಯದ ಬಗ್ಗೆ ಅಧಿಕಾರಿಗಳಿಗೆ ಈ ಹಿಂದೆಯೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆಘಾತಕಾರಿ ಘಟನೆಯ ನಂತರ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭರವಸೆ ನೀಡಿದ್ದಾರೆ.

Category
ಕರಾವಳಿ ತರಂಗಿಣಿ