image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಕೇವಲ ಊಹಾಪೋಹ. ನಾನು 2028ಕ್ಕೆ ಸಿಎಂ ಆಗಬೇಕೆಂಬ ಬಯಕೆ ಹೊಂದಿದ್ದೇನೆ: ಸಚಿವ ಸತೀಶ್​ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಕೇವಲ ಊಹಾಪೋಹ. ನಾನು 2028ಕ್ಕೆ ಸಿಎಂ ಆಗಬೇಕೆಂಬ ಬಯಕೆ ಹೊಂದಿದ್ದೇನೆ: ಸಚಿವ ಸತೀಶ್​ ಜಾರಕಿಹೊಳಿ

ಹಾಸನ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸ್ವತಃ ಹೈಕಮಾಂಡ್​ ಹೇಳಿದ್ದು, ಸಿದ್ದರಾಮಯ್ಯ ಅವರ ಬದಲಾವಣೆ ಯಾವುದೇ ಕಾರಣಕ್ಕೂ ಆಗಲ್ಲ. ಅದು ಕೇವಲ ಊಹಾಪೋಹ. ಸಿಎಂ ಬದಲಾವಣೆ ಚರ್ಚೆ ಏನೇ ಇದ್ದರೂ, ಅದು ಸದ್ಯಕ್ಕೆ ಇಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ಅವರು ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ,  ಯಾರು ಏನೇ ಹೇಳಿದರೂ ಸಿಎಂ ಬದಲಾವಣೆ ಚರ್ಚೆ ಪಕ್ಷದೊಳಗೆ ನಡೆದಿಲ್ಲ. ಹಾಗಾಗಿ ಆ ಪ್ರಶ್ನೆ ಉದ್ಭವಿಸದು. ಸಿಎಂ ಹಾಲಿ ಇದ್ದಾರೆ. ನಾನು 2028ಕ್ಕೆ ಸಿಎಂ ಆಗಬೇಕೆಂಬ ಬಯಕೆ ಹೊಂದಿದ್ದೇನೆ. ಅದೇ ಕಾರಣಕ್ಕೆ ನನ್ನ ಮಗಳೂ ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅಲ್ಲಿಯವರೆಗೂ ಕಾಯೋಣ ಎಂದರು.

ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂಬ ಹೊರಗಿನ ಚರ್ಚೆಗೆ ನಾನು ಉತ್ತರಿಸುವುದಿಲ್ಲ. ನನ್ನ ಹಲವು ಹಿತೈಷಿಗಳು ನಾನೇ ಸಿಎಂ ಎಂದು ಹೇಳಿದ್ದರೂ, ಅದು ಸಿಎಂ ಸಿದ್ದರಾಮಯ್ಯ ಅವರ ಅವಧಿ ಮುಗಿದ ಮೇಲೆ ಅಷ್ಟೇ. ನಾನು ಮುಂದೆ ಸಿಎಂ ಆದರೆ ಅದು ಸಿದ್ದರಾಮಯ್ಯ ಅವರ ಸಹಕಾರದಿಂದಲೇ ಆಗುತ್ತೇನೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರವಾಗಿ ಕೆಬಿ ಕೋಳಿವಾಡ ಅವರು ನೀಡಿರುವ ಹೇಳಿಕೆ ಅವರ ವೈಯಕ್ತಿಕ.

ರಾಜ್ಯದಲ್ಲಿ ಜಾತಿ-ಗಣತಿ ವರದಿ ಜಾರಿ ವಿಚಾರದಲ್ಲಿ ಬೇಕು-ಬೇಡ ಎಂಬ ಚರ್ಚೆ ನಡೆಯುತ್ತಿದೆ. ಆದರೆ ಸಚಿವ ಸಂಪುಟದಲ್ಲಿ ಇದು ಚರ್ಚೆಗೆ ಬಂದಿಲ್ಲ. ಬಂದ ಮೇಲೆ ನೋಡೋಣ ಎಂದರು. ಜೊತೆಗೆ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಆಗಬೇಕು ಎಂಬ ಕೂಗಿದೆ. ಈ ಸಂಬಂಧ ಪ್ರತಿಭಟನೆ ನಡೆಯುತ್ತಿದೆ. ಚುನಾವಣಾ ಪ್ರಣಾಳಿಕೆಯಲ್ಲೇ ಜಾರಿ ಮಾಡುವ ಭರವಸೆ ನೀಡಿದ್ದು, ಅದನ್ನು ಮಾಡುತ್ತೇವೆ ಎಂದು ಸಚಿವರು ಹೇಳಿದರು.

Category
ಕರಾವಳಿ ತರಂಗಿಣಿ