image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕೋವಿಡ್ ಅಕ್ರಮ ತನಿಖೆಗೆ ಎಸ್​ಐಟಿ ಜೊತೆಗೆ ಕ್ಯಾಬಿನೆಟ್ ಸಬ್ ಕಮಿಟಿ ರಚಿಸಲು ಒಪ್ಪಿಗೆ ನೀಡಿದ ಸಚಿವ ಸಂಪುಟ

ಕೋವಿಡ್ ಅಕ್ರಮ ತನಿಖೆಗೆ ಎಸ್​ಐಟಿ ಜೊತೆಗೆ ಕ್ಯಾಬಿನೆಟ್ ಸಬ್ ಕಮಿಟಿ ರಚಿಸಲು ಒಪ್ಪಿಗೆ ನೀಡಿದ ಸಚಿವ ಸಂಪುಟ

ಬೆಂಗಳೂರು : ಕೋವಿಡ್ ಅವಧಿಯ ವೇಳೆ ನಡೆದ ಹಗರಣ ಕುರಿತಂತೆ ನ್ಯಾ. ಮೈಕೆಲ್ ಡಿ.ಕುನ್ಹಾ ವಿಚಾರಣಾ ಆಯೋಗದ ಮಧ್ಯಂತರ ವರದಿ ಆಧರಿಸಿ ಕ್ರಮ ಜರುಗಿಸುವ ಕುರಿತು ರಾಜ್ಯ ಸಚಿವ ಸಂಪುಟ ಸಭೆ ಇಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಕೋವಿಡ್ ಅಕ್ರಮ ತನಿಖೆಗೆ ಎಸ್​​ಐಟಿ ವಿಶೇಷ ತಂಡ ರಚನೆ ಜೊತೆಗೆ ಕ್ಯಾಬಿನೆಟ್ ಸಬ್ ಕಮಿಟಿ ರಚನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಇಂದು ನಡೆದ ಸಂಪುಟ ಸಭೆ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್  ಈ ಕುರಿತು ಮಾಹಿತಿ ನೀಡಿದರು. ಕೋವಿಡ್-19 ವೈದ್ಯಕೀಯ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ಅವರ ವಿಚಾರಣಾ ಆಯೋಗವು ಆಗಸ್ಟ್ 31, 2024ರಂದು ಸಲ್ಲಿಸಿರುವ ಭಾಗಶ: ವರದಿಯ ಮೇಲೆ ಕೈಗೊಳ್ಳಬೇಕಾಗುವ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ಆಯೋಗ 11 ಸಂಪುಟಗಳನ್ನು ಸಲ್ಲಿಸಿದೆ. 7223. 64 ಕೋಟಿ ಮೊತ್ತದ ಅವ್ಯವಹಾರದ ತನಿಖೆ ನಡೆದಿದೆ. 500 ಕೋಟಿ ರೂ. ವಸೂಲಾತಿಗೆ ಆಯೋಗ ಶಿಫಾರಸು ಮಾಡಿದೆ. ಬಿಬಿಎಂಪಿ ನಾಲ್ಕು ವಲಯ ಹಾಗೂ ರಾಜ್ಯದ 31 ಜಿಲ್ಲೆಗಳಿ‌ಂದ ಇನ್ನೂ ವರದಿ ಬರಬೇಕಿದೆ. 55 ಸಾವಿರ ಕಡತಗಳನ್ನು ಪರಿಶೀಲಿಸಿದ್ದಾರೆ. ಕ್ರಿಮಿನಲ್ ಹಿನ್ನೆಲೆ ಇರುವ ಕಾರಣ ಎಸ್​​ಐಟಿ ರಚನೆಗೆ ಹಾಗೂ ಕ್ಯಾಬಿನೆಟ್ ಸಬ್ ಕಮಿಟಿ ರಚನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Category
ಕರಾವಳಿ ತರಂಗಿಣಿ