image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯ ಬಿಜೆಪಿಯಲ್ಲಿ ಮುಂದುವರೆದ ಉಚ್ಚಾಟನೆ ಪರ್ವ: ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ ಪಕ್ಷದಿಂದ ಅಮಾನತು

ರಾಜ್ಯ ಬಿಜೆಪಿಯಲ್ಲಿ ಮುಂದುವರೆದ ಉಚ್ಚಾಟನೆ ಪರ್ವ: ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ ಪಕ್ಷದಿಂದ ಅಮಾನತು

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಮುಖಂಡರ ಉಚ್ಚಾಟನೆ ಪ್ರಕ್ರಿಯೆ ತೀವ್ರಗೊಂಡಿದೆ. ಮೊನ್ನೆಯಷ್ಟೇ ಪಕ್ಷದ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವದ ವಿರುದ್ಧ ಹಗುರವಾಗಿ ಮಾತನಾಡಿದ ಆರೋಪದ ಮೇಲೆ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿತ್ತು. ಇದರ ಬೆನ್ನಲ್ಲೇ, ಇಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಬಮೂಲ್ ನಿರ್ದೇಶಕರಾಗಿರುವ ಸತೀಶ್ ಕಡತನಮಲೆ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸತೀಶ್ ಕಡತನಮಲೆ ಅವರ ನಡವಳಿಕೆ ಕುರಿತು ಸ್ಥಳೀಯ ಮುಖಂಡರು ರಾಜ್ಯ ಶಿಸ್ತು ಸಮಿತಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಅವರಿಗೆ ಶೋಕಾಸ್ ನೋಟಿಸ್ ನೀಡಿ ಸ್ಪಷ್ಟೀಕರಣ ಕೇಳಿತ್ತು. ಆದರೆ, ಅವರು ನೀಡಿದ ವಿವರಣೆಯು ಸಮಂಜಸ ಹಾಗೂ ತೃಪ್ತಿಕರವಾಗಿಲ್ಲದ ಕಾರಣ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

Category
ಕರಾವಳಿ ತರಂಗಿಣಿ