image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರೈತರ ಸಾಲ ಮನ್ನಾ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರೈತರ ಸಾಲ ಮನ್ನಾ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಕಲಬುರಗಿ : ಕಲಬುರಗಿ ಕಂದಾಯ ವಿಭಾಗದ ಜಿಲ್ಲೆಗಳ ಪ್ರಗತಿ ಪರಿಶೀಲನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿಯ ಬಗ್ಗೆ ಪರಾಮರ್ಶ ನಡೆಸಲಾಗುವುದು. ಕಲಬುರಗಿ ವಿಭಾಗದ ಅಧಿಕಾರಿಗಳ ಸಭೆ ಇಂದು ನಡೆಸಲಾಗುತ್ತಿದೆ. ಎರಡು ಮೂರು ದಿನಗಳಲ್ಲಿ ಬೆಳಗಾವಿಗೆ ತೆರಳಿ ಅಲ್ಲೂ ಪರಾಮರ್ಶೆ ಮಾಡಲಾಗುವುದು. ರೈತರದು ಎಷ್ಟು ಸಾಲ ಇದೆ. ಯಾವ ಬಗೆಯ ಸಾಲ ಇದೆ. ಎಲ್ಲಾ ಪರಿಶೀಲಿಸಿ ನಿರ್ಣಯ ಮಾಡಲಾಗುವುದು' ಎಂದು ಪ್ರತಿಕ್ರಿಯಿಸಿದರು. ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಗೃಹಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಶರಣಪ್ರಕಾಶ್ ಪಾಟೀಲ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಈ ಸಂದರ್ಭದಲ್ಲಿದ್ದರು.

Category
ಕರಾವಳಿ ತರಂಗಿಣಿ