image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪಂಚ ಗ್ಯಾರಂಟಿ ವೆಚ್ಚದ ಎಫೆಕ್ಟ್​: ₹60,000 ಕೋಟಿ ಸಾಲದ ಮೊರೆ ಹೋದ ರಾಜ್ಯ ಸರ್ಕಾರ

ಪಂಚ ಗ್ಯಾರಂಟಿ ವೆಚ್ಚದ ಎಫೆಕ್ಟ್​: ₹60,000 ಕೋಟಿ ಸಾಲದ ಮೊರೆ ಹೋದ ರಾಜ್ಯ ಸರ್ಕಾರ

 ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪಂಚ ಗ್ಯಾರಂಟಿ ಹಾಗೂ ವೆಚ್ಚದ ಭಾರಿ ಹೊರೆಯ ಮಧ್ಯೆ ಆಡಳಿತ ನಡೆಸುತ್ತಿದ್ದು, ರಾಜ್ಯ ಸರ್ಕಾರ  ಹಣಕಾಸು ನಿರ್ವಹಣೆಗೆ ಸಾಲವನ್ನು ಅವಲಂಬಿಸಿದೆ. ಪ್ರಸಕ್ತ ವರ್ಷದ ಆರು ತಿಂಗಳಲ್ಲಿ ಹೆಚ್ಚಿನ ಸಾಲದ ಮೊರೆ ಹೋಗದ ರಾಜ್ಯ ಸರ್ಕಾರ ಇದೀಗ ಸಾಲ ಎತ್ತುವಳಿ ಪ್ರಕ್ರಿಯೆಗೆ ವೇಗ ನೀಡಿದೆ.

ಬಜೆಟ್ ವರ್ಷದ ಆರು ತಿಂಗಳು ಕಳೆದಿದ್ದು, ಕಾಂಗ್ರೆಸ್ ಸರ್ಕಾರದ ಎರಡನೇ ಬಜೆಟ್ ವರ್ಷದಲ್ಲೂ ಪಂಚ ಗ್ಯಾರಂಟಿಗೆ ಹೆಚ್ಚಿನ‌ ಹಣ ಕೊಡಮಾಡಲಾಗುತ್ತಿದೆ. ಇದರ ಜೊತೆಗೆ ಏಳನೇ ವೇತನ‌ ಆಯೋಗದ ಪರಿಷ್ಕರಣೆಯಿಂದ  ವೆಚ್ಚ ದುಪ್ಪಟ್ಟಾಗಿದೆ. ದೊಡ್ಡ ಆರ್ಥಿಕ ಹೊರೆಯ ಮಧ್ಯೆ ಕಾಂಗ್ರೆಸ್ ಸರ್ಕಾರ ಹಣಕಾಸು ನಿರ್ವಹಣೆ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೂ ಹಣ ಹೊಂದಿಸುವ ಒತ್ತಡದಲ್ಲಿ ಸಿಎಂ ಸಿದ್ದರಾಮಯ್ಯ ಸರಕಾರ ಇದೆ.

ಹೀಗಾಗಿ ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಸಾಲದ ಮೊರೆ ಹೋಗಲು ನಿರ್ಧರಿಸಿದ್ದು, ಸಾಲದ ಮೂಲಕ ಬಂಡವಾಳ ವೆಚ್ಚಕ್ಕೆ ಹೆಚ್ಚಿನ ಹಣ ನೀಡಲು ತೀರ್ಮಾನಿಸಿದೆ. ಕಳೆದ ಬಾರಿಗಿಂತ ಈ ವರ್ಷ ಆದಾಯ ಸಂಗ್ರಹ ಉತ್ತಮವಾಗಿದ್ದರೂ, ಈವರೆಗೆ ಬಜೆಟ್ ಗುರಿಯಂತೆ ಆದಾಯ ತಲುಪಲು ಸಾಧ್ಯವಾಗುತ್ತಿಲ್ಲ.

ಸಾರ್ವಜನಿಕ ಸಾಲವಾಗಿ ಐದು ತಿಂಗಳಲ್ಲಿ ಸುಮಾರು 7,000 ಕೋಟಿ ರೂ. ಸಾಲ ಮಾಡಿದೆ. ಉಳಿದಂತೆ ಆರ್​ಬಿಐ ಮೂಲಕ ಮುಕ್ತ ಮಾರುಕಟ್ಟೆಯಿಂದ ಹೆಚ್ಚಿನ ಸಾಲ ಎತ್ತುವಳಿ ಮಾಡಿರಲಿಲ್ಲ. ಆದರೆ, ಇದೀಗ ಆರ್​ಬಿಐ ಮೂಲಕ ಮುಕ್ತ ಮಾರುಕಟ್ಟೆಯಿಂದ ಸಾಲ ಎತ್ತುವಳಿಗೆ ವೇಗ ನೀಡಲು ಆರಂಭಿಸಿದೆ.

Category
ಕರಾವಳಿ ತರಂಗಿಣಿ