image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ವಾಲ್ಮೀಕಿ ನಿಗಮ ಅವ್ಯವಹಾರದ ಪೈಕಿ 71.54 ಕೋಟಿ ರೂ ವಸೂಲಿ ಮಾಡಲಾಗಿದೆ. ಇನ್ನು 13 ಕೋಟಿ ವಸೂಲಿಗೆ ಬಾಕಿ : ಸಿಎಂ

ವಾಲ್ಮೀಕಿ ನಿಗಮ ಅವ್ಯವಹಾರದ ಪೈಕಿ 71.54 ಕೋಟಿ ರೂ ವಸೂಲಿ ಮಾಡಲಾಗಿದೆ. ಇನ್ನು 13 ಕೋಟಿ ವಸೂಲಿಗೆ ಬಾಕಿ : ಸಿಎಂ

ಬೆಂಗಳೂರು: "ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾದ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಿಗಮದಲ್ಲಿ ಸುಮಾರು 89.63 ಕೋಟಿ ರೂ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್​ ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲಿ ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿ ಮೊತ್ತವನ್ನು ವಸೂಲಿ ಮಾಡಿಕೊಡುವುದಾಗಿ ಎಸ್​ಐಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿದ್ದು, ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ" ಎಂದು ಹೇಳಿದರು.

ಇದೇ ವೇಳೆ, "ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ" ಎಂದು ತಿಳಿಸಿದರು.

Category
ಕರಾವಳಿ ತರಂಗಿಣಿ