ಬೆಂಗಳೂರು : "ಕೃಷಿ ಕೆಲಸ ಮಾಡಿ ದಣಿದು ಬಂದ ಕಾರ್ಮಿಕರಿಗೆ ನೀಡಲು ದಿನಸಿ ಅಂಗಡಿಯಲ್ಲಿ ಮದ್ಯ ಇರಿಸಲಾಗಿತ್ತು" ಎಂಬ ಅರ್ಜಿದಾರರ ಪರ ವಕೀಲರ ವಾದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಅಚ್ಚರಿ ವ್ಯಕ್ತಪಡಿಸಿದೆ. ಇಂತಹ ಪದ್ಧತಿಯನ್ನು ಸ್ಕಾಟ್‌ಲ್ಯಾಂಡ್‌ನಲ್ಲಿ ವಿಸ್ಕಿ ಕಂಡುಹಿಡಿದಾಗ ಮಾಡಲಾಗುತ್ತಿತ್ತು, ಅದನ್ನು ಭಾರತದಲ್ಲಿ ಅನುಸರಿಸುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಖಾರವಾಗಿ ಪ್ರತಿಕ್ರಿಯಿಸಿದೆ. ತುಮಕೂರು ಜಿಲ್ಲೆಯ ಮಣಿಕುಪ್ಪೆ ಗ್ರಾಮದ ಯಶೋಧಮ್ಮ ಎಂಬುವರ ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು. ಇದನ್ನು ಹಾಗೂ ಗುಬ್ಬಿ ಜೆಎಂಎಫ್‌ಸಿ ಕೋರ್ಟ್ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, 22.8 ಲೀಟರ್ ವಿಸ್ಕಿ ಹಾಗೂ 7 ಬಾಟಲಿ ಬಿಯರ್ ಅನ್ನು ಮಾರಾಟಕ್ಕಲ್ಲದೆ, ಕೆಲಸ ಮಾಡಿ ಬರುವ ಕಾರ್ಮಿಕರ ವೈಯಕ್ತಿಕ ಬಳಕೆಗೆ ಇಡಲಾಗಿತ್ತು ಎಂದು ಸಮಜಾಯಿಷಿ ನೀಡಿದರು. ಇದನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ಮದ್ಯ ಇಟ್ಟುಕೊಳ್ಳಲು ಪರವಾನಗಿ ಕಡ್ಡಾಯ, ದಿನಸಿ ಅಂಗಡಿಯಲ್ಲಿ ಇಷ್ಟೊಂದು ಪ್ರಮಾಣದ ಮದ್ಯ ಇರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು. ಅಲ್ಲದೆ, ಜನರನ್ನು ಅಮಲಿನಲ್ಲಿ ಮುಳುಗಿಸಿ ಹಾಳು ಮಾಡುತ್ತಿರುವುದಕ್ಕೆ ಸರ್ಕಾರದ ವಿರುದ್ಧ ಪ್ರತ್ಯೇಕ ಪ್ರಕರಣ ಸಹ ದಾಖಲಿಸಬೇಕು ಎಂದು ಮೌಖಿಕವಾಗಿ ನುಡಿಯಿತು.
ಅರ್ಜಿದಾರರು ಮಹಿಳೆಯಾಗಿದ್ದು, ಪ್ರಕರಣವು ಇನ್ನು ಪ್ರಾಥಮಿಕ ಹಂತದಲ್ಲಿರುವುದರಿಂದ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜೊತೆಗೆ ಗುಬ್ಬಿ ವಲಯದ ಅಬಕಾರಿ ಸಬ್ ಇನ್ಸ್‌ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ. ತುಮಕೂರು ಜಿಲ್ಲೆಯ ಮಣಿಕುಪ್ಪೆ ಗ್ರಾಮದ ಯಶೋಧಮ್ಮ ಎಂಬುವರು ತಮ್ಮ ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರೆಂಬ ಆರೋಪದ ಮೇಲಿನ ಅಧೀನ ನ್ಯಾಯಾಲಯದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅರ್ಜಿದಾರರು ಮಹಿಳೆಯಾಗಿದ್ದು, ಪ್ರಕರಣ ಇನ್ನೂ ಆರಂಭಿಕ ಹಂತದಲ್ಲಿರುವುದರಿಂದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು ಈ ಆದೇಶ ಹೊರಡಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, "ದಿನಸಿ ಅಂಗಡಿಯಲ್ಲಿ ಇರಿಸಲಾಗಿದ್ದ ಮದ್ಯವನ್ನು ಮಾರಾಟ ಮಾಡುತ್ತಿರಲಿಲ್ಲ. ಕೃಷಿ ಕೆಲಸ ಮಾಡಿ ದಣಿದು ಬರುವ ಕಾರ್ಮಿಕರಿಗೆ ನೀಡಲು ಹಾಗೂ ವೈಯಕ್ತಿಕ ಬಳಕೆಗೆ ಇರಿಸಿಕೊಳ್ಳಲಾಗಿತ್ತು" ಎಂದು ವಾದಿಸಿದರು. ಈ ಸಮಜಾಯಿಷಿಯಿಂದ ಅಚ್ಚರಿಗೊಂಡ ನ್ಯಾಯಪೀಠ, "ವಿಸ್ಕಿ ಕಂಡುಹಿಡಿದಾಗ ಸ್ಕಾಟ್‌ಲ್ಯಾಂಡ್‌ನಲ್ಲಿ ಈ ರೀತಿ ಮಾಡಲಾಗುತ್ತಿತ್ತು. ಆ ಪದ್ಧತಿಯನ್ನು ಭಾರತದಲ್ಲಿ ಮಾಡುವ ಅಗತ್ಯವಿಲ್ಲ. ಪರವಾನಗಿ ಇಲ್ಲದೆ ದಿನಸಿ ಅಂಗಡಿಯಲ್ಲಿ 22.8 ಲೀಟರ್ ವಿಸ್ಕಿ ಹಾಗೂ 7 ಬಾಟಲಿ ಬಿಯರ್ ಇರಿಸಿಕೊಳ್ಳಲು ಹೇಗೆ ಸಾಧ್ಯ?" ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.
ಅಲ್ಲದೆ, "ಜನರನ್ನು ಅಮಲಿನಲ್ಲಿ ಮುಳುಗಿಸಿ ಹಾಳು ಮಾಡುತ್ತಿರುವುದಕ್ಕೆ ಸರ್ಕಾರದ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಬೇಕು" ಎಂದು ಮೌಖಿಕವಾಗಿ ನುಡಿದ ನ್ಯಾಯಪೀಠ, ಪ್ರಕರಣದ ವಿಚಾರಣೆ ಮುಂದುವರಿದು ಅಕ್ರಮ ಮಾರಾಟವೋ ಅಥವಾ ವೈಯಕ್ತಿಕ ಬಳಕೆಯೋ ಎಂಬ ಸತ್ಯಾಂಶ ಹೊರಬರಲಿ ಎಂದು ತಿಳಿಸಿತು. ಸದ್ಯ ಗುಬ್ಬಿ ವಲಯದ ಅಬಕಾರಿ ಸಬ್ ಇನ್ಸ್‌ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿರುವ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.