image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪಶುವೈದ್ಯಾಧಿಕಾರಿಗಳ ಆಯ್ಕೆ ಪಟ್ಟಿಗೆ ಕೆಪಿಎಸ್‍ಸಿ ತಡೆ

ಪಶುವೈದ್ಯಾಧಿಕಾರಿಗಳ ಆಯ್ಕೆ ಪಟ್ಟಿಗೆ ಕೆಪಿಎಸ್‍ಸಿ ತಡೆ

ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಬೆನ್ನಲ್ಲೇ, ಪಶುವೈದ್ಯಾಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿಯ ಜಾರಿಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ) ನಿರ್ಧರಿಸಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಜುಲೈ 24ರಂದು ದಾಖಲಾಗಿರುವ ದೂರು, ಜುಲೈ 25ರಂದು ನೀಡಲಾದ ಎಫ್‌ಐಆರ್ (FIR) ಹಾಗೂ ಮಾಧ್ಯಮ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ಕೆಪಿಎಸ್‍ಸಿ, ಜುಲೈ 26ರಂದು ತುರ್ತು ಸಭೆ ನಡೆಸಿ ಈ ಮಹತ್ವದ ತೀರ್ಮಾನ ಕೈಗೊಂಡಿದೆ.

ಸಾರ್ವಜನಿಕರಲ್ಲಿ ಆಯೋಗದ ಮೇಲಿರುವ ವಿಶ್ವಾಸವನ್ನು ಕಾಪಾಡುವ ನಿಟ್ಟಿನಲ್ಲಿ, ಕೆಪಿಎಸ್‌ಸಿಯ ಹಿರಿಯ ಸದಸ್ಯರ ಅಧ್ಯಕ್ಷತೆಯಲ್ಲಿ ಆಂತರಿಕ ತನಿಖಾ ಉಪಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತ ಹಾಗೂ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಒಂದು ವಾರದೊಳಗೆ ಆಯೋಗಕ್ಕೆ ವಿವರವಾದ ವಾಸ್ತವಾಂಶಗಳ ವರದಿ ಸಲ್ಲಿಸಲಿದೆ. ತನಿಖಾ ಸಮಿತಿಗೆ ಅಗತ್ಯವಾದ ಆಡಳಿತಾತ್ಮಕ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಲು ಕೆಪಿಎಸ್‌ಸಿ ಕಾರ್ಯದರ್ಶಿ ಕೆ. ಜ್ಯೋತಿ ಅವರನ್ನು ಹಾಗೂ ಅಗತ್ಯ ಕಾನೂನು ಸಲಹೆಗಾಗಿ ಕಾನೂನು ವಿಭಾಗದ ಮುಖ್ಯಸ್ಥರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ.

Category
ಕರಾವಳಿ ತರಂಗಿಣಿ