image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಚರ್ಚೆಗೆ ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ

ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಚರ್ಚೆಗೆ ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ

ನವದೆಹಲಿ: ಮೇಕೆದಾಟು ಮತ್ತು ಮಹದಾಯಿ ಯೋಜನೆಗಳು ಸೇರಿದಂತೆ ರಾಜ್ಯದ ಕುಡಿಯುವ ನೀರು ಹಾಗೂ ಜಲ ಸಂಪನ್ಮೂಲ ಯೋಜನೆಗಳ ಪ್ರಸ್ತುತ ಸ್ಥಿತಿಗತಿ ಮತ್ತು ರಾಜ್ಯದ ಜಲಾಶಯಗಳಲ್ಲಿನ ನೀರಿನ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ಮತ್ತು ಜಲ ಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಉನ್ನತ ಮಟ್ಟದ ಸಮಾಲೋಚನೆ ನಡೆಸಿದರು.

ಈ ಸಭೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ, ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ರಾಜ್ಯದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ನಕುಲ್ ಹಾಗೂ ತಾಂತ್ರಿಕ ಸಲಹೆಗಾರ ಜೈಪ್ರಕಾಶ್ ಸೇರಿದಂತೆ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ