image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಹಿಂಗಾರು ಮಳೆ ವಾಡಿಕೆಯಂತೆ ಬರುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ

ಹಿಂಗಾರು ಮಳೆ ವಾಡಿಕೆಯಂತೆ ಬರುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಭಾವದಿಂದಾಗಿ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತ ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಆದಾಗ್ಯೂ, ಮುಂಬರುವ ಹಿಂಗಾರು ಮಳೆಯು ವಾಡಿಕೆಯಂತೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಭರವಸೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಛತ್ತೀಸ್‌ಗಢ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಎಫೆಕ್ಟ್ ನೆರೆಯ ಮಹಾರಾಷ್ಟ್ರಕ್ಕೂ ತಟ್ಟಲಿದೆ. ಈ ವಾತಾವರಣದ ಬದಲಾವಣೆಯಿಂದಾಗಿ ಕರ್ನಾಟಕದ ಕರಾವಳಿ ಭಾಗ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ಅದೇ ರೀತಿ ಕೊಡಗು ಮತ್ತು ಮೈಸೂರು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಪೆಸಿಫಿಕ್ ಮಹಾಸಾಗರದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಹಿಂಗಾರು ಮಳೆಯು ಯಾವುದೇ ಕೊರತೆಯಿಲ್ಲದೆ ವಾಡಿಕೆಯಂತೆ ಬೀಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ