image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ವಿಳಂಬ: ವಿಜಯಪುರದಲ್ಲಿ ಗೇಟ್ ಮುರಿದು ಅಭ್ಯರ್ಥಿಗಳ ಆಕ್ರೋಶ!

ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ವಿಳಂಬ: ವಿಜಯಪುರದಲ್ಲಿ ಗೇಟ್ ಮುರಿದು ಅಭ್ಯರ್ಥಿಗಳ ಆಕ್ರೋಶ!

ವಿಜಯಪುರ : ಜಿಲ್ಲೆಯ ತಿಕೋಟಾದ ಕೋಟ್ಯಾಳ್ ರಸ್ತೆಯಲ್ಲಿರುವ ಶಾರದಾಂಬಾ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಇಂದು ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ವೇಳೆ ಭಾರೀ ಗೊಂದಲ ಹಾಗೂ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನಿಯಮದ ಪ್ರಕಾರ ಬೆಳಿಗ್ಗೆ 10:30ಕ್ಕೆ ನೀಡಬೇಕಿದ್ದ ಪ್ರಶ್ನೆ ಪತ್ರಿಕೆಯನ್ನು ಸುಮಾರು ಅರ್ಧ ಗಂಟೆ ತಡವಾಗಿ, ಅಂದರೆ 11:00 ಗಂಟೆಗೆ ವಿತರಿಸಲಾಗಿದೆ ಎಂದು ಪರೀಕ್ಷಾರ್ಥಿಗಳು ಗಂಭೀರವಾಗಿ ಆರೋಪಿಸಿದ್ದಾರೆ. ಸಮಯದ ಅಭಾವ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆಯ ಕೊರತೆಯನ್ನು ಪ್ರಶ್ನಿಸಿ ಆಕ್ರೋಶಗೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಮುಂಭಾಗ ತೀವ್ರ ಪ್ರತಿಭಟನೆ ನಡೆಸಿ, ಕಾಲೇಜಿನ ಮುಖ್ಯ ಗೇಟ್ ಅನ್ನು ಮುರಿದು ಹಾಕಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ವಿಜಯಪುರ ಜಿಲ್ಲಾಧಿಕಾರಿ ಆನಂದ ಕೆ. ಅವರು ತಕ್ಷಣ ಸ್ಥಳಕ್ಕೆ ಧಾವಿಸಿ, ಪರೀಕ್ಷಾರ್ಥಿಗಳನ್ನು ಭೇಟಿಯಾಗಿ ಮಾಹಿತಿ ಪಡೆದರು. ಜೊತೆಗೆ ಕಾಲೇಜಿನ ಸಿಬ್ಬಂದಿ ಹಾಗೂ ಅಧಿಕಾರಿಗಳಿಂದ ಪರೀಕ್ಷೆ ವಿಳಂಬಕ್ಕೆ ಕಾರಣವೇನು ಎಂಬ ವಿವರಣೆ ಪಡೆದು ಅಭ್ಯರ್ಥಿಗಳನ್ನು ಸಮಾಧಾನಪಡಿಸಲು ಯತ್ನಿಸಿದರು.

> "ನಾವು ತಿಂಗಳುಗಟ್ಟಲೆ ಕಷ್ಟಪಟ್ಟು ಪರೀಕ್ಷೆಗೆ ತಯಾರಿ ನಡೆಸಿದ್ದೇವೆ. ಅರ್ಧ ಗಂಟೆ ತಡವಾಗಿ ಪ್ರಶ್ನೆ ಪತ್ರಿಕೆ ನೀಡಿದರೆ ನಮಗೆ ಉತ್ತರಿಸಲು ಸಮಯ ಸಾಕಾಗುವುದಿಲ್ಲ. ಇಂತಹ ಬೇಜವಾಬ್ದಾರಿತನದಿಂದ ಅಭ್ಯರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ" ಎಂದು ಪರೀಕ್ಷಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

> ಸದ್ಯ ಪರೀಕ್ಷಾ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

Category
ಕರಾವಳಿ ತರಂಗಿಣಿ