image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮುಸ್ಲಿಂರ ವಿವಾಹ ನೋಂದಣಿ ಪ್ರಮಾಣಪತ್ರ ವಿತರಿಸುವ ಅಧಿಕಾರ ವಕ್ಫ್​ ಮಂಡಳಿಗೆ ನೀಡಿದ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್​

ಮುಸ್ಲಿಂರ ವಿವಾಹ ನೋಂದಣಿ ಪ್ರಮಾಣಪತ್ರ ವಿತರಿಸುವ ಅಧಿಕಾರ ವಕ್ಫ್​ ಮಂಡಳಿಗೆ ನೀಡಿದ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್​

ಬೆಂಗಳೂರು : ಮುಸ್ಲಿಂ ಸಮುದಾಯದ ದಂಪತಿಗಳಿಗೆ ವಿವಾಹ ನೋಂದಣಿ ಪ್ರಮಾಣಪತ್ರ ವಿತರಣೆ ಮಾಡುವ ಅಧಿಕಾರವನ್ನು ವಕ್ಫ್​ ಮಂಡಳಿಗೆ ವಹಿಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದೆ.

ಬೆಂಗಳೂರಿನ ಇಂದಿರಾ ನಗರದ ನಿವಾಸಿ ಎ. ಆಲಂಪಾಷ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್​. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ. ವಿ. ಅರವಿಂದ್​ ಅವರಿದ್ದ ನ್ಯಾಯಪೀಠ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಮತ್ತು ವಕ್ಫ್​ ಮಂಡಳಿಗೆ ನೋಟಿಸ್​ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮುಸ್ಲಿಂ ಸಮುದಾಯದ ದಂಪತಿಗಳಿಗೆ ವಿವಾಹ ನೋಂದಣಿ ಮಾಡುವ ಅಧಿಕಾರವನ್ನು ವಕ್ಫ್​ ಮಂಡಳಿಗೆ ವಹಿಸಿ 2023ರ ಆಗಸ್ಟ್​ 3 ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮತ್ತು ಜಿಲ್ಲಾ ವಕ್ಫ್​ ಸಲಹಾ ಸಮಿತಿಗಳು ಕೆಲ ಷರತ್ತುಗಳೊಂದಿಗೆ ಮುಸ್ಲಿಂ ದಂಪತಿಗಳಿಗೆ ವಿವಾಹ ನೋಂದಣಿ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ರೀತಿಯಲ್ಲಿ ವಿವಾಹ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಣೆ ಮಾಡುವುದಕ್ಕೆ ವಕ್ಫ್​ ಕಾಯ್ದೆ ಅಡಿಯಲ್ಲಿ ಅಧಿಕಾರ ಹೊಂದಿಲ್ಲ. ಅಲ್ಲದೆ, ಈ ಆದೇಶ ಸಂವಿಧಾನದ ಪರಿಚ್ಛೇದ 14ಕ್ಕೆ ತದ್ವಿರುದ್ಧವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಈ ಅಸಮಂಜಸವಾದ ಆದೇಶವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು.

Category
ಕರಾವಳಿ ತರಂಗಿಣಿ