image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ವಿಧಾನ ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಯತೀಂದ್ರ ಸಿದ್ದರಾಮಯ್ಯ?

ವಿಧಾನ ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಯತೀಂದ್ರ ಸಿದ್ದರಾಮಯ್ಯ?

ಬೆಂಗಳೂರು : ರಾಜ್ಯ ವಿಧಾನ ಪರಿಷತ್ತಿನ ಸಭಾ ನಾಯಕನ ಪ್ರಮುಖ ಹೊಣೆಗಾರಿಕೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೆಗಲಿಗೆ ಬೀಳುವುದು ಬಹುತೇಕ ಖಚಿತವಾಗಿದೆ. ಮೇಲ್ಮನೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್‌ನಿಂದ ಏಕೈಕ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವುದೇ ಅವರಿಗೆ ಈ ಮಹತ್ವದ ಜವಾಬ್ದಾರಿ ದೊರೆಯಲು ಮುಖ್ಯ ಕಾರಣ ಎಂದು ಹೇಳಲಾಗಿದೆ.

ಕಳೆದ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಎನ್.ಎಸ್. ಬೋಸರಾಜ್ ಅವರು ಸಚಿವರಾಗಿ ಕರ್ತವ್ಯ ನಿರ್ವಹಿಸುವುದರ ಜೊತೆಗೆ ವಿಧಾನ ಪರಿಷತ್ತಿನ ಸಭಾ ನಾಯಕರಾಗಿಯೂ ಸಭೆಯನ್ನು ಮುನ್ನಡೆಸಿದ್ದರು. ಅದೇ ಮಾದರಿಯಲ್ಲಿ ಇದೀಗ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸಭಾ ನಾಯಕ ಸ್ಥಾನವನ್ನು ವಹಿಸಲು ಕಾಂಗ್ರೆಸ್‌ ವರಿಷ್ಠರು ಹಾಗೂ ರಾಜ್ಯ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಆಗಸ್ಟ್ 13 ರಿಂದ ಆರಂಭವಾಗಲಿರುವ ಮಳೆಗಾಲದ ಅಧಿವೇಶನದಲ್ಲಿ ಯತೀಂದ್ರ ಅವರು ವಿಧಾನ ಪರಿಷತ್‌ನಲ್ಲಿ ಆಡಳಿತ ಪಕ್ಷವನ್ನು ಮುನ್ನಡೆಸಲಿದ್ದಾರೆ. ಜೊತೆಗೆ, ಸಭಾ ನಾಯಕ ಸ್ಥಾನ ನೀಡುವ ಮೂಲಕ ಸಿದ್ದರಾಮಯ್ಯ ಅವರ ಮುನಿಸು ಹಾಗೂ ಅಸಮಾಧಾನವನ್ನು ಶಮನಗೊಳಿಸುವ ರಾಜಕೀಯ ಪ್ರಯತ್ನವೂ ಇದರ ಹಿಂದೆ ನಡೆದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Category
ಕರಾವಳಿ ತರಂಗಿಣಿ