image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯದಲ್ಲಿ ಭೀಕರ ಬರ: ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭೀಕರ ಬರ: ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಶಿವಮೊಗ್ಗ : ರಾಜ್ಯದ 240 ತಾಲ್ಲೂಕುಗಳ ಪೈಕಿ 164 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆಯಿಂದ ಭೀಕರ ಬರಗಾಲ ಆವರಿಸಿದ್ದು, ಸಾರ್ವಜನಿಕರು ಹಾಗೂ ರೈತರ ಸಮಸ್ಯೆಗಳಿಗೆ ಯುದ್ಧೋಪಾದಿಯಲ್ಲಿ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ, ಪ್ರತಿಯೊಬ್ಬ ಸರ್ಕಾರಿ ನೌಕರನೂ ಜವಾಬ್ದಾರಿಯಿಂದ ಜನರ ಸೇವೆಗೆ ಬದ್ಧರಾಗಿರಬೇಕು ಎಂದು ಕರೆ ನೀಡಿದರು.

ಸರ್ಕಾರದ ಯೋಜನೆಗಳು ಹಾಗೂ ಪರಿಹಾರ ಕ್ರಮಗಳು ತಳಮಟ್ಟದ ಜನರಿಗೆ ತಲುಪಲು 'ಪ್ರಜಾಸೇವೆ' ಇಲಾಖೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿದೆ. ಅಂತರ್ಜಲ ಮಟ್ಟ ಕುಸಿತದಿಂದ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗಿರುವುದರಿಂದ, ಕೆ.ಎಮ್.ಎಫ್ ಮೂಲಕ 1 ಲಕ್ಷ ಮೇವಿನ ಕಿಟ್‌ಗಳನ್ನು ವಿತರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಗ್ರಾಮೀಣ ಭಾಗದಿಂದ ಜನರು ಗುಳೆ ಹೋಗುವುದನ್ನು ತಡೆಯಲು ವಿಬಿ ಜಿ ರಾಮ್ ಜಿ ಯೋಜನೆಯಡಿ 51,000 ಮಾನವ ದಿನಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಬೆಳೆ ವಿಮೆ ನಷ್ಟ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ಇನ್ಶೂರೆನ್ಸ್ ಕಂಪನಿಗಳ ವಿರುದ್ಧ ಶೀಘ್ರವೇ ಪ್ರತ್ಯೇಕ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು.

ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಹಾಗೂ ಸಾಂಸ್ಕೃತಿಕ ಭಾವೈಕ್ಯತೆ ಮೂಡಿಸಲು ಪ್ರತಿಯೊಂದು ಪಂಚಾಯಿತಿಯಲ್ಲಿ 'ಭಾರತ್ ಜೋಡೋ' ಸಂಘಗಳನ್ನು ರಚಿಸಿ, ಪ್ರತಿ ಸಂಘಕ್ಕೆ ವರ್ಷಕ್ಕೆ ರೂ.10 ಲಕ್ಷ ಅನುದಾನ ನೀಡುವ ಯೋಜನೆ ಜಾರಿಗೆ ತರಲಾಗುತ್ತಿದೆ. ಸೆಪ್ಟೆಂಬರ್ ತಿಂಗಳಲ್ಲಿ ಬರಗಾಲದ ತೀವ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಬೇಕು ಎಂದು ಸೂಚಿಸಲಾಯಿತು. ಈ ಪರಿಶೀಲನಾ ಸಭೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಲಕ್ಷ್ಮಣ ಸವದಿ, ಸಂತೋಷ್ ಎಸ್. ಲಾಡ್, ಅಜಯ್ ಸಿಂಗ್, ವಿಜಯಾನಂದ ಕಾಶಪ್ಪನವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ