image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕಳಪೆ ಆಹಾರ ಪೂರೈಸುವ ಹಾಸ್ಟೆಲ್, ಪಿಜಿಗಳ ವಿರುದ್ಧ ಕಠಿಣ ಕ್ರಮ

ಕಳಪೆ ಆಹಾರ ಪೂರೈಸುವ ಹಾಸ್ಟೆಲ್, ಪಿಜಿಗಳ ವಿರುದ್ಧ ಕಠಿಣ ಕ್ರಮ

ಬೆಂಗಳೂರು: ರಾಜ್ಯದ ಹೋಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲನೆ ಬಿರುಸಿನಿಂದ ನಡೆಯುತ್ತಿರುವ ಬೆನ್ನಲ್ಲೇ, ಇದೀಗ ಹಾಸ್ಟೆಲ್‌ಗಳು, ಪಿಜಿಗಳು ಮತ್ತು ಕ್ಯಾಂಟೀನ್‌ಗಳ ಮೇಲೆಯೂ ಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸಲು ಮುಂದಾಗಿದೆ. ಸರ್ಕಾರಿ, ಖಾಸಗಿ ಹಾಗೂ ಸಹಕಾರಿ ವಲಯದ ಹಾಸ್ಟೆಲ್‌ಗಳಲ್ಲಿ ಆಹಾರ ತಯಾರಿಸುವ ವಿಧಾನ, ಅಡುಗೆಮನೆಯ ನೈರ್ಮಲ್ಯ ಹಾಗೂ ಆಹಾರ ಪದಾರ್ಥಗಳ ಸಂಗ್ರಹಣೆ ಕುರಿತು ಸಮಗ್ರ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ ತಪಾಸಣೆ ಪ್ರಕ್ರಿಯೆ ಆರಂಭವಾಗಿದ್ದು, ಇದೇ ಮಾದರಿಯನ್ನು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕಟ್ಟುನಿಟ್ಟಾಗಿ ಜಾರಿಗೆ ತರಲು ಆರೋಗ್ಯ ಇಲಾಖೆ ಸೂಚಿಸಿದೆ.

ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಶಿಸ್ತುಬದ್ಧ ಹಾಗೂ ಗುಣಮಟ್ಟದ ಆಹಾರ ಒದಗಿಸುವುದು ಪ್ರತಿಯೊಂದು ಸಂಸ್ಥೆಯ ಕರ್ತವ್ಯವಾಗಿದೆ. ಹಣ ಪಡೆದು ಕಳಪೆ ಅಥವಾ ನೈರ್ಮಲ್ಯ ರಹಿತ ಆಹಾರ ಪೂರೈಸಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುವುದನ್ನು ಸಹಿಸುವುದಿಲ್ಲ ಎಂದು ಸರ್ಕಾರ ಎಚ್ಚರಿಸಿದೆ. ಆಹಾರ ಸುರಕ್ಷತೆ ಮತ್ತು ಸ್ವಚ್ಛತಾ ನಿಯಮಗಳನ್ನು ಉಲ್ಲಂಘಿಸುವ ಪಿಜಿ ಹಾಗೂ ಹಾಸ್ಟೆಲ್ ಆಡಳಿತ ಮಂಡಳಿಗಳ ವಿರುದ್ಧ ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

Category
ಕರಾವಳಿ ತರಂಗಿಣಿ