image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪಾನ್‌ ಮಸಾಲಾ ನಿಷೇಧ ಆದೇಶ ವಾಪಸ್‌ಗೆ ಸಿಎಂ ಸೂಚನೆ

ಪಾನ್‌ ಮಸಾಲಾ ನಿಷೇಧ ಆದೇಶ ವಾಪಸ್‌ಗೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ತಂಬಾಕು ಮತ್ತು ನಿಕೋಟಿನ್ ಒಳಗೊಂಡ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ ಮತ್ತು ಮಾರಾಟದ ಮೇಲೆ ವಿಧಿಸಲಾಗಿದ್ದ ಒಂದು ವರ್ಷದ ನಿಷೇಧ ಆದೇಶವನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಆಹಾರ ಸುರಕ್ಷತಾ ಆಯುಕ್ತರು ಹೊರಡಿಸಿದ್ದ ಈ ನಿಷೇಧದ ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ರಾಜ್ಯಾದ್ಯಂತ ಜಾರಿಯಾಗಿದ್ದ ಈ ನಿಷೇಧದ ಆದೇಶ ಹೊರಬಿದ್ದ ಕೇವಲ ಎರಡು ದಿನಗಳಲ್ಲಿಯೇ ಸರ್ಕಾರ ಅದನ್ನು ವಾಪಸ್ ಪಡೆಯಲು ಕ್ರಮ ವಹಿಸಿದೆ. ತಮ್ಮ ಗಮನಕ್ಕೆ ತರದೆ ಈ ನಿರ್ಧಾರ ಕೈಗೊಳ್ಳಲಾಗಿದೆ ಮತ್ತು ಇದರಿಂದ ಅಡಕೆ ಬೆಳೆಗಾರರು ಹಾಗೂ ರೈತರಿಗೆ ಭಾರಿ ಪ್ರಮಾಣದ ಆರ್ಥಿಕ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ನಿಯೋಗವೊಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿತ್ತು. ನಿಷೇಧದಿಂದಾಗಿ ಅಡಕೆ ಮಾರುಕಟ್ಟೆಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರಲಿದ್ದು, ರೈತರ ಹಿತರಕ್ಷಣೆಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ನಿಯೋಗ ಕೋರಿತ್ತು. ಶಾಸಕರ ಮನವಿಗೆ ಸ್ಪಂದಿಸಿದ ಸರ್ಕಾರ, ಇದೀಗ ನಿಷೇಧ ಆದೇಶ ಹಿಂಪಡೆಯಲು ಸೂಚನೆ ನೀಡಿದೆ.

Category
ಕರಾವಳಿ ತರಂಗಿಣಿ