image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ವಿದೇಶ

ಯುಎಇಯ ಅಮೆರಿಕನ್ ವಾಯುನೆಲೆ ಮೇಲೆ ಇರಾನ್ ಡ್ರೋನ್ ದಾಳಿ

ಯುಎಇಯ ಅಮೆರಿಕನ್ ವಾಯುನೆಲೆ ಮೇಲೆ ಇರಾನ್ ಡ್ರೋನ್ ದಾಳಿ

ಯು. ಎ. ಇ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿರುವ (ಯುಎಇ) ಅಮೆರಿಕದ ಅಲ್ ಮಿನ್ಹಾದ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಇರಾನ್ ಸೇನೆಯು ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಅಮೆರಿಕಕ್ಕೆ ಸೇರಿದ ಒಂದು ಹೆಲಿಕಾಪ್ಟರ್ ನಾಶವಾಗಿದ್ದು, ಯುಎಸ್ ಪಡೆಗಳ ವಿವಿಧ ನೆಲೆಗಳ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಇರಾನ್ ಸೇನೆ ಸೋಮವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಅಮೆರಿಕ ನಡೆಸಿದ ಇತ್ತೀಚಿನ ಆಕ್ರಮಣಕಾರಿ ದಾಳಿಗೆ ಪ್ರತಿಯಾಗಿ ಹಾಗೂ ಲಾರಕ್ ದ್ವೀಪದಲ್ಲಿ ಇಸ್ಲಾಮಿಕ್ ರೆವಲ್ಯೂಷನ್ ಗಾರ್ಡ್ಸ್ ಕಾರ್ಪ್ಸ್ (IRGC) ಸಿಬ್ಬಂದಿ ಮತ್ತು ಅಮಾಯಕ ಇರಾನಿಯನ್ನರ ಸಾವಿಗೆ ಪ್ರತೀಕಾರವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಲ್ ಮಿನ್ಹಾದ್ ವಾಯುನೆಲೆಯು ಅಮೆರಿಕ ಪಡೆಗಳ ಪ್ರಮುಖ ಲಾಜಿಸ್ಟಿಕ್ಸ್ ಕೇಂದ್ರವಾಗಿದ್ದು, ಪ್ರಾದೇಶಿಕ ಬೆದರಿಕೆಗಳನ್ನು ಸಂಪೂರ್ಣವಾಗಿ ನಿಲ್ಲಿಸುವವರೆಗೆ ತಮ್ಮ ರಾಷ್ಟ್ರೀಯ ಭದ್ರತಾ ಹೋರಾಟ ಮತ್ತು ಸೇಡು ತೀರಿಸಿಕೊಳ್ಳುವ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಎಚ್ಚರಿಸಿವೆ.

ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡುವುದಾಗಿ ಇರಾನ್‌ನ ಪ್ರಭಾವಿ ಪಡೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಈ ಹಿಂದೆ ನೀಡಿದ್ದ ಎಚ್ಚರಿಕೆಯ ಬೆನ್ನಲ್ಲೇ ಈ ಕಾರ್ಯಾಚರಣೆ ನಡೆದಿದೆ. ಇನ್ನೊಂದೆಡೆ ಈ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ ರಕ್ಷಣಾ ಸಚಿವಾಲಯ, ಇರಾನ್‌ನ ವಾಯು ದಾಳಿಗಳನ್ನು ತಮ್ಮ ಪಡೆಗಳು ಯಶಸ್ವಿಯಾಗಿ ಎದುರಿಸುತ್ತಿವೆ ಎಂದು ಹೇಳಿದೆ. ಯಾವುದೇ ಸಂಭಾವ್ಯ ಭದ್ರತಾ ಬೆದರಿಕೆಗಳನ್ನು ನಿಭಾಯಿಸಲು ಸಶಸ್ತ್ರ ಪಡೆಗಳು ಸಂಪೂರ್ಣ ಸಿದ್ಧತೆಯಲ್ಲಿದ್ದು, ವಾಯು ರಕ್ಷಣಾ ವ್ಯವಸ್ಥೆಗಳು ದಿನದ 24 ಗಂಟೆಯೂ ನಿರಂತರ ಮೇಲ್ವಿಚಾರಣೆ ನಡೆಸುತ್ತಿವೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ.

Category
ಕರಾವಳಿ ತರಂಗಿಣಿ