ಚೀನಾ : ಅರುಣಾಚಲ ಪ್ರದೇಶದ ಭಾರತ-ಚೀನಾ ಗಡಿ ಪ್ರದೇಶದಲ್ಲಿ ಚೀನಾ ಸೈನಿಕರ ಚಟುವಟಿಕೆಗಳಿಂದಾಗಿ ಮತ್ತೆ ಸಂಘರ್ಷ ಮತ್ತು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ ಎಂದು ಭಾರತ ಎಚ್ಚರಿಕೆ ನೀಡಿದೆ. ಭಾರತದ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಚೀನಾ ವಿದೇಶಾಂಗ ಸಚಿವಾಲಯ, ತಾನು ಎರಡು ದೇಶಗಳ ನಡುವಿನ ಗಡಿ ಒಪ್ಪಂದಗಳು ಮತ್ತು ಸಮ್ಮತಿಗಳಿಗೆ ಸಂಪೂರ್ಣವಾಗಿ ಬದ್ಧವಾಗಿರುವುದಾಗಿ ತಿಳಿಸಿದೆ.
ಗಡಿ ಪ್ರದೇಶಗಳಲ್ಲಿ ನಿಯಮಿತವಾಗಿ ಗಸ್ತು ತಿರುಗುವುದು ಸಹಜ ಪ್ರಕ್ರಿಯೆಯಾಗಿದ್ದು, ಗಡಿಯ ಸ್ಥಿರತೆ ಹಾಗೂ ಶಾಂತಿಯನ್ನು ಕಾಪಾಡಿಕೊಳ್ಳಲು ಎರಡೂ ದೇಶಗಳು ಜಂಟಿಯಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಚೀನಾ ಹೇಳಿದೆ. ಪರಸ್ಪರರ ಭದ್ರತಾ ಕಾಳಜಿ ಹಾಗೂ ಸಾರ್ವಭೌಮತ್ವವನ್ನು ಗೌರವಿಸುವ ಮೂಲಕ ಗಡಿ ಭಾಗದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಸ್ಥಾಪಿಸಲು ಭಾರತವು ಚೀನಾದೊಂದಿಗೆ ಸಹಕರಿಸಲಿದೆ ಎಂಬ ಭರವಸೆಯನ್ನು ಚೀನಾ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.