image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ವಿದೇಶ

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಬೃಹತ್ ಪ್ರತಿಭಟನೆ: ಸರ್ಕಾರ ಹಾಗೂ ಭಾರತದ ವಿರುದ್ಧ ಆಕ್ರೋಶ

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಬೃಹತ್ ಪ್ರತಿಭಟನೆ: ಸರ್ಕಾರ ಹಾಗೂ ಭಾರತದ ವಿರುದ್ಧ ಆಕ್ರೋಶ

ಢಾಕ : ಬಾಂಗ್ಲಾದೇಶದಲ್ಲಿ ಪ್ರಧಾನಿ ತಾರಿಕ್ ರೆಹಮಾನ್ ನೇತೃತ್ವದ ಆಡಳಿತಾರೂಢ ಸರ್ಕಾರದ ವಿರುದ್ಧ ನ್ಯಾಷನಲ್ ಸಿಟಿಜನ್ ಪಾರ್ಟಿ (NCP) ಢಾಕಾದಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ದೇಶದಲ್ಲಿ ನಿರಂತರವಾಗಿ ಎದುರಾಗುತ್ತಿರುವ ತೀವ್ರ ಬೆಲೆ ಏರಿಕೆ, ಇಂಧನ ಮತ್ತು ಎಲ್‌ಪಿಜಿ ಕೊರತೆ ಹಾಗೂ ವಿದ್ಯುತ್ ಕಡಿತವನ್ನು ಖಂಡಿಸಿ ಎನ್‌ಸಿಪಿ ಕಾರ್ಯಕರ್ತರು ಬೀದಿಗಿಳಿದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರಧಾನಿ ತಾರಿಕ್ ರೆಹಮಾನ್ ಅವರ ಆಡಳಿತ ವೈಫಲ್ಯವನ್ನು ಪ್ರಶ್ನಿಸಿದ ಪ್ರತಿಭಟನಾಕಾರರು, ಭಾರತ ವಿರೋಧಿ ಘೋಷಣೆಗಳನ್ನೂ ಕೂಗಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎನ್‌ಸಿಪಿ ಸಂಚಾಲಕ ನಹೀದ್ ಇಸ್ಲಾಂ, ಭಾರತ-ಬಾಂಗ್ಲಾದೇಶ ಗಡಿ ಭಾಗದಲ್ಲಿ ನಿರಂತರವಾಗಿ ಸಾವುಗಳು ಸಂಭವಿಸುತ್ತಿವೆ ಎಂದು ಗಂಭೀರ ಆರೋಪ ಮಾಡಿದರು. ಮುಂಬರುವ ಡಿಸೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿರುವ ಚಾರಿತ್ರಿಕ 'ಗಂಗಾ ನೀರು ಹಂಚಿಕೆ ಒಪ್ಪಂದ'ದ ಬಗ್ಗೆ ಪ್ರಸ್ತಾಪಿಸಿದ ಅವರು, ಬಾಂಗ್ಲಾದೇಶಕ್ಕೆ ನ್ಯಾಯಯುತವಾದ ನೀರಿನ ಪಾಲು ಸಿಗದಿದ್ದರೆ ದೇಶಾದ್ಯಂತ ಮತ್ತೆ ತೀವ್ರ ಮಟ್ಟದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಭಾರತಕ್ಕೆ ಎಚ್ಚರಿಕೆ ನೀಡಿದರು.

Category
ಕರಾವಳಿ ತರಂಗಿಣಿ