image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ವಿದೇಶ

ಸ್ವಿಟ್ಜರ್ಲ್ಯಾಂಡ್ ನ ಐಷಾರಾಮಿ ಬಾರ್ ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭ ಸ್ಫೋಟ : ಹಲವು ಸಾವು

ಸ್ವಿಟ್ಜರ್ಲ್ಯಾಂಡ್ ನ ಐಷಾರಾಮಿ ಬಾರ್ ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭ ಸ್ಫೋಟ : ಹಲವು ಸಾವು

ಸ್ವಿಟ್ಜರ್ಲ್ಯಾಂಡ್ : ಇಲ್ಲಿನ ಐಷಾರಾಮಿ ಬಾರ್ ಒಂದರಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಕ್ರಾನ್ಸ್-ಮೊಂಟಾನಾದ ಸ್ಕೀ ರೆಸಾರ್ಟ್ ಪಟ್ಟಣದ ಲೆ ಕಾನ್ಸ್ಟೆಲೇಷನ್ ಬಾರ್ ಮತ್ತು ಲೌಂಜ್ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಅಧಿಕಾರಿಗಳು ಈ ಘಟನೆಗೆ ನಿಖರವಾದ ಕಾರಣವನ್ನು ಇನ್ನೂ ಬಹಿರಂಗಪಡಿಸಿಲ್ಲ. ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದಲ್ಲಿ ಬಾರ್ ಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಗುರುವಾರ ಮುಂಜಾನೆ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ವೀಡಿಯೊಗಳಲ್ಲಿ ಘಟನೆಯ ನಂತರ ಬಾರ್‌ನಿಂದ ದೊಡ್ಡ ಪ್ರಮಾಣದ ಹೊಗೆ ಹೊರಬರುತ್ತಿರುವುದನ್ನು ತೋರಿಸಲಾಗಿದೆ.

Category
ಕರಾವಳಿ ತರಂಗಿಣಿ