image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ವಿದೇಶ

'ಅಮೆರಿಕಕ್ಕೆ ಒಂದು ಕಟ್ಟಡ ಕಟ್ಟಲೂ ಕಡಿಮೆ ಬೀಳುವ ಹಣದಲ್ಲಿ ಭಾರತ ಚಂದ್ರನ ಅಂಗಳಕ್ಕೆ ತಲುಪಿದೆ' : ಅಮೆರಿಕ ಸಂಸದ ರಿಚ್ ಮೆಕ್‌ಕಾರ್ಮಿಕ್

'ಅಮೆರಿಕಕ್ಕೆ ಒಂದು ಕಟ್ಟಡ ಕಟ್ಟಲೂ ಕಡಿಮೆ ಬೀಳುವ ಹಣದಲ್ಲಿ ಭಾರತ ಚಂದ್ರನ ಅಂಗಳಕ್ಕೆ ತಲುಪಿದೆ' : ಅಮೆರಿಕ ಸಂಸದ ರಿಚ್ ಮೆಕ್‌ಕಾರ್ಮಿಕ್

ಅಮೇರಿಕಾ : 2023ರಲ್ಲಿ ಮೊದಲ ಬಾರಿ ಚಂದ್ರನ ದಕ್ಷಿಣ ಧ್ರುವ ತಲುಪಿದ ಭಾರತದ ಚಂದ್ರಯಾನ-3ರ ಬಗ್ಗೆ ಅಮೆರಿಕ ಸಂಸದ ರಿಚ್ ಮೆಕ್‌ಕಾರ್ಮಿಕ್ ಮೆಚ್ಚುಗೆ ವ್ಯಕ್ತಪಡಿಸಿದ್ದು, 'ಅಮೆರಿಕಕ್ಕೆ ಒಂದು ಕಟ್ಟಡ ಕಟ್ಟಲೂ ಕಡಿಮೆ ಬೀಳುವ ಹಣದಲ್ಲಿ ಭಾರತ ಚಂದ್ರನ ಅಂಗಳಕ್ಕೆ ತಲುಪಿದೆ' ಎಂದು ಹೇಳಿದ್ದಾರೆ. '726 ಕೋಟಿ ರು.(80 ಮಿಲಿಯನ್‌ ಡಾಲರ್‌) ಖರ್ಚಿನಲ್ಲಿ ಭಾರತವು ತನ್ನ ಬಾಹ್ಯಾಕಾಶ ನೌಕೆಯನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿತು. ಆದರೆ ಅಮೆರಿಕಕ್ಕೆ ಇಷ್ಟು ಹಣದಲ್ಲಿ ಒಂದು ಕಟ್ಟಡ ಕಟ್ಟುವುದೂ ಕಷ್ಟ' ಎಂದರು. ಈ ಮೂಲಕ, ಬಜೆಟ್‌ ಸ್ನೇಹಿ ಯೋಜನೆಗಳಿಗೆ ಹೆಸರುವಾಸಿಯಾಗಿರುವ ಇಸ್ರೋವನ್ನು ಶ್ಲಾಘಿಸಿದ್ದಾರೆ.

Category
ಕರಾವಳಿ ತರಂಗಿಣಿ