image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ವಿದೇಶ

ಪಾಕಿಸ್ತಾನದ ಮಸೀದಿ ದಾಳಿಯ ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್‌ ಗ್ರೂಪ್

ಪಾಕಿಸ್ತಾನದ ಮಸೀದಿ ದಾಳಿಯ ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್‌ ಗ್ರೂಪ್

ಇಸ್ಲಾಮಾಬಾದ್: ಇಸ್ಲಾಮಾಬಾದ್‌ ನ ಶಿಲ್ಟೆ ಮಸೀದಿಯಲ್ಲಿ ಸಂಭವಿಸಿದ ಆತ್ಮಹತ್ಯಾ ಬಾಂಬರ್ ದಾಳಿಯಲ್ಲಿ ಕನಿಷ್ಠ 31 ಮಂದಿ ಮೃತಪಟ್ಟಿದ್ದು, 169ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್‌ ಗ್ರೂಪ್ ಹೊತ್ತುಕೊಂಡಿದೆ. ಪಾಕಿಸ್ತಾನದ ರಾಜಧಾನಿಯಾದ ಇಸ್ಲಾಮಾಬಾದ್‌ ನಲ್ಲಿ 2008ರ ಮ್ಯಾರಿಯಟ್ ಹೋಟೆಲ್ ಮೇಲಿನ ಬಾಂಬ್ ದಾಳಿಯ ನಂತರ ನಡೆದ ಅತ್ಯಂತ ಭೀಕರ ಬಾಂಬ್ ದಾಳಿ ಇದಾಗಿದೆ.

ಇಸ್ಲಾಮಾಬಾದ್‌ ನ ಹೊರವಲಯದಲ್ಲಿರುವ ತಲರಾಯಿ ಪ್ರದೇಶದ ಇಮಾಂ ಬರ್ಗಾ ಕಸರ್-ಇ-ಖಾದಿಜತುಲ್ ಕುಬ್ರಾ ಮಸೀದಿಯಲ್ಲಿ ನಡೆದ ಬಾಂಬ್ ದಾಳಿಯಲ್ಲಿ 31 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ನಗರ ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದೂ ಅವರು ಹೇಳಿದ್ದಾರೆ. ಪ್ರಾರ್ಥನೆಗಾಗಿ ದೇಶದಾದ್ಯಂತ ಮಸೀದಿಗಳು ಜನರಿಂದ ಕಿಕ್ಕಿರಿದು ತುಂಬಿದ್ದ ವೇಳೆ ಈ ಬಾಂಬ್ ಸ್ಫೋಟ ಸಂಭವಿಸಿದೆ. "ದಾಳಿಕೋರನನ್ನು ಮಸೀದಿಯ ದ್ವಾರದ ಬಳಿಯೇ ತಡೆಯಲಾಗಿದ್ದು, ಆತ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ" ಎಂದು ಭದ್ರತಾ ಮೂಲಗಳು ತಿಳಿಸಿವೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿರುವ ಇಸ್ಲಾಮಿಕ್ ಸ್ಟೇಟ್, "ನಮ್ಮ ಸದಸ್ಯನೊಬಬ್ಬ ಸಭೆಯ ಮೇಲೆ ಬಾಂಬ್ ದಾಳಿ ನಡೆಸಿದ್ದು, ಇದರಿಂದ ದೊಡ್ಡ ಪ್ರಮಾಣದ ಸಾವು-ನೋವು ಸಂಭವಿಸಿದೆ" ಎಂದು ಹೇಳಿಕೊಂಡಿದೆ ಎಂದು ಅವರ ಮೇಲೆ ನಿಗಾವಹಿಸಿಯರುವ SITE ಗುಪ್ತಚರ ಗುಂಪು ತಿಳಿಸಿದೆ.

Category
ಕರಾವಳಿ ತರಂಗಿಣಿ