ಬಲೂಚಿಸ್ತಾನ : ಭಾರತ - ಪಾಕಿಸ್ತಾನ ಟಿ- 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡವು ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯ ಸಂಭ್ರಮಾಚರಣೆ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಟೀಮ್ ಇಂಡಿಯಾದ ಪ್ರಬಲ ಪ್ರದರ್ಶನಕ್ಕೆ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದಲೂ ಕೆಲವರು ಸಂಭ್ರಮಿಸಿರುವ ವಿಡಿಯೋ ಹಾಗೂ ಪೋಸ್ಟ್‌ಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ನು ಭಾರತದ ವಿರುದ್ಧ ಪಾಕಿಸ್ತಾನ ಸೋತ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಬ್ ಅಖ್ತರ್, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ತಂಡದ ನಿರ್ವಹಣೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ದೂರದರ್ಶನದ ಸಂವಾದದಲ್ಲಿ ಮಾತನಾಡಿದ ಅಖ್ತರ್, ಕಳಪೆ ಪ್ರದರ್ಶನ ನೀಡುವ ಹಿರಿಯ ಆಟಗಾರರನ್ನು ಬೆಂಬಲಿಸುವುದು ತಂಡಕ್ಕೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ. ಆಡಳಿತಾತ್ಮಕ ನಿರ್ಧಾರಗಳು ಮತ್ತು ಪಾಕಿಸ್ತಾನ ಕ್ರಿಕೆಟ್‌ನ ತೀರ್ಮಾನಗಳ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕಳಪೆ ಫೀಲ್ಡಿಂಗ್ ಹೆಚ್ಚಿನ ಒತ್ತಡದ ಪಂದ್ಯಗಳಲ್ಲಿ ಪುನರಾವರ್ತಿತ ಸೋಲುಗಳಿಗೆ ಕಾರಣವಾಗಿದೆ. ಪಾಕಿಸ್ತಾನದ ಸೋಲು ತಂಡದ ಪ್ರದರ್ಶನ ಮತ್ತು ಮಂಡಳಿಯ ಕಾರ್ಯನಿರ್ವಹಣೆಯ ಪರಿಶೀಲನೆಯನ್ನು ತೋರಿಸುತ್ತದೆ ಎಂದಿದ್ದಾರೆ.