image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ವಿದೇಶ

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಾರಕಕ್ಕೆ : ಗಲ್ಪ್ ರಾಷ್ಟಗಳಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ ಎಂದ ಅಮೇರಿಕ

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಾರಕಕ್ಕೆ : ಗಲ್ಪ್ ರಾಷ್ಟಗಳಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ ಎಂದ ಅಮೇರಿಕ

ದುಬೈ : ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಾರಕಕ್ಕೇರಿದ್ದು, ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ತನ್ನ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ತೀವ್ರಗೊಳಿಸಿದೆ. ಈ ಮಧ್ಯೆ ಅಮೆರಿಕವು ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಇರಾನ್ ತನ್ನ ನೆರೆಹೊರೆಯ ಗಲ್ಫ್ ರಾಷ್ಟ್ರಗಳಾದ ಸೌದಿ ಅರೇಬಿಯಾ, ಸಂಯುಕ್ತ ಅರಬ್ ಎಮಿರೇಟ್ಸ್ (UAE) ಮತ್ತು ಕತಾರ್‌ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ಹೆಚ್ಚಿಸಿದೆ. ಈ ದಾಳಿಗಳು ಪ್ರಮುಖ ತೈಲ ಸಂಸ್ಕರಣಾ ಕೇಂದ್ರಗಳು ಮತ್ತು ವಾಣಿಜ್ಯ ಬಂದರುಗಳನ್ನು ಗುರಿಯಾಗಿಸಿಕೊಂಡಿವೆ ಎನ್ನಲಾಗಿದೆ.

ಈ ದಾಳಿಗಳು ಕೇವಲ ಪ್ರಾದೇಶಿಕ ಭದ್ರತೆಗೆ ಮಾತ್ರವಲ್ಲದೆ ಜಾಗತಿಕ ಇಂಧನ ಪೂರೈಕೆಗೂ ಸಂಚಕಾರ ತರಲಿವೆ ಎಂದು ಅಮೆರಿಕದ ರಕ್ಷಣಾ ಇಲಾಖೆ ಎಚ್ಚರಿಸಿದೆ. ಪರಿಸ್ಥಿತಿ 'ನಿಯಂತ್ರಣ ಮೀರಿ' ಹೋಗುವ ಮೊದಲು ಇರಾನ್ ದಾಳಿ ನಿಲ್ಲಿಸಬೇಕೆಂದು ವಾಷಿಂಗ್ಟನ್ ತಾಕೀತು ಮಾಡಿದೆ. ಇತ್ತೀಚೆಗೆ ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್‌ನ ಪ್ರಮುಖ ಸೇನಾ ನೆಲೆಗಳ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ಈ ಕ್ರಮ ಕೈಗೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಗಲ್ಫ್ ರಾಷ್ಟ್ರಗಳು ತಮ್ಮ ವಾಯು ರಕ್ಷಣಾ ವ್ಯವಸ್ಥೆಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟಿವೆ. ಸೌದಿ ಅರೇಬಿಯಾ ಮತ್ತು ಯುಎಇ ಈಗಾಗಲೇ ವಿಶ್ವಸಂಸ್ಥೆಗೆ ದೂರು ನೀಡಿವೆ, ಇರಾನ್‌ನ ಇಂತಹ ಉದ್ಧಟತನದ ವರ್ತನೆ ಶಾಂತಿಗೆ ಭಂಗ ತರುತ್ತಿದೆ ಎಂದು ಆರೋಪಿಸಿವೆ.

Category
ಕರಾವಳಿ ತರಂಗಿಣಿ