image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ವಿದೇಶ

ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ತೆರೆಯಲು ಸಾಧ್ಯವಿಲ್ಲ : ಇರಾನ್‌ ಸ್ಪಷ್ಟನೆ

ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ತೆರೆಯಲು ಸಾಧ್ಯವಿಲ್ಲ : ಇರಾನ್‌ ಸ್ಪಷ್ಟನೆ

ಟೆಹರಾನ್ : ತಾತ್ಕಾಲಿಕ ಕದನ ವಿರಾಮಕ್ಕಾಗಿ ಮುಚ್ಚಿರುವ ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ತೆರೆಯಲು ಸಾಧ್ಯವಿಲ್ಲ ಎಂದು ಇರಾನ್‌ ಸ್ಪಷ್ಟಪಡಿಸಿದೆ. ಇರಾನ್‌ನ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಶಾಶ್ವತ ಕದನ ವಿರಾಮವನ್ನು ಜಾರಿಗೆ ತರುವಲ್ಲಿ ಅಮೆರಿಕಾಗೆ ಸಿದ್ಧತೆ ಮತ್ತು ಇಚ್ಛಾಶಕ್ತಿಯ ಕೊರತೆಯಿದೆ ಎಂದು ಇರಾನ್‌ ಅಭಿಪ್ರಾಯಪಟ್ಟಿದೆ. ಪಾಕಿಸ್ತಾನ ಕಳುಹಿಸಿರುವ ತಕ್ಷಣದ ಕದನ ವಿರಾಮದ ಪ್ರಸ್ತಾವನೆಯನ್ನು ಇರಾನ್ ಸ್ವೀಕರಿಸಿದ್ದು, ಅದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಖಚಿತಪಡಿಸಿದ್ದಾರೆ. ಯಾವುದೇ ಗಡುವುಗಳನ್ನು ವಿಧಿಸಿ, ಒತ್ತಡ ಹೇರುವುದು ಅಥವಾ ತುರ್ತು ನಿರ್ಧಾರ ತೆಗೆದುಕೊಳ್ಳುವಂತೆ ಮಾಡುವುದನ್ನು ಇರಾನ್ ಒಪ್ಪುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Category
ಕರಾವಳಿ ತರಂಗಿಣಿ