ಟೆಹರಾನ್ : ಇರಾನ್‌ನ ಹೊಸ ಪರಮೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಖೋಮ್ ಎಂಬ ನಗರದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಅಂತರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿದೆ. ಒಂದು ಸಾಲಿನಲ್ಲಿಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಆಡಳಿತ ನಿರ್ವಹಣೆಯಲ್ಲಿ ಅಸಮರ್ಥರಾಗಿದ್ದಾರೆ ಎಂದು ವರದಿಯಾಗಿದೆ.
ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿ ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಖೋಮ್ ನಗರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ಮಾಡಿದೆ. 56 ವರ್ಷದ ಮೊಜ್ತಬಾ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಪ್ರಸ್ತುತ ಯುದ್ಧ ಅಥವಾ ಆಡಳಿತಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಅವರು ಇಲ್ಲ. ಹಿಂದಿನ ಸರ್ವೋಚ್ಚ ನಾಯಕರ ಹತ್ಯೆಫೆಬ್ರವರಿ 28ರಂದು ಅಮೆರಿಕ-ಇಸ್ರೆಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 86 ವರ್ಷದ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಆಯತೊಲ್ಲಾ ಅಲಿ ಖಮೇನಿ ಅವರ ಮರಣದ ನಂತರ ಮೊಜ್ತಬಾ ಖಮೇನಿ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು, ಆದರೆ ಅವರು ಇದುವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.