image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ವಿದೇಶ

ಮುಂದಿನ ವರ್ಷ ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ

ಮುಂದಿನ ವರ್ಷ ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ

ಅಮೇರಿಕ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮುಂದಿನ ವರ್ಷದ ಆರಂಭದಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ತಿಳಿಸಿದ್ದಾರೆ. ಟ್ರಂಪ್ ಅವರ ಈ ಪ್ರವಾಸದ ಸಿದ್ಧತೆಗಳಿಗಾಗಿ ತಾವು ಈ ವರ್ಷದ ಅಂತ್ಯದೊಳಗೆ ಭಾರತಕ್ಕೆ ಭೇಟಿ ನೀಡಲಿದ್ದು, ಅಗತ್ಯ ಕ್ರಮಗಳನ್ನು ಪರಿಶೀಲಿಸುವುದಾಗಿ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ.

2025ರಲ್ಲಿ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ನೀಡುತ್ತಿರುವ ಮೊದಲ ಪ್ರವಾಸ ಇದಾಗಿದೆ. ಇದಕ್ಕೂ ಮುನ್ನ ಅವರು 2020ರ ಫೆಬ್ರುವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದಾಗ ಅಹಮದಾಬಾದ್‌ನಲ್ಲಿ ನಡೆದಿದ್ದ ಐತಿಹಾಸಿಕ 'ನಮಸ್ತೆ ಟ್ರಂಪ್' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇತ್ತೀಚೆಗೆ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆಯು ಉಭಯ ದೇಶಗಳ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ರುಬಿಯೊ ಸ್ಮರಿಸಿದ್ದಾರೆ. ಭಾರತವು ಅಮೆರಿಕದ ಅತ್ಯಂತ ಆಪ್ತ ಜಾಗತಿಕ ಪಾಲುದಾರ ರಾಷ್ಟ್ರವಾಗಿದ್ದು, ಪ್ರಧಾನಿ ಮೋದಿ ಅವರ ಜಾಗತಿಕ ಪ್ರಭಾವ ಹಾಗೂ ನಾಯಕತ್ವವನ್ನು ಅಮೆರಿಕ ಶ್ಲಾಘಿಸುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

Category
ಕರಾವಳಿ ತರಂಗಿಣಿ