image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ವಿದೇಶ

ಸಿಂಧೂ ನದಿ ನೀರು: ಭಾರತಕ್ಕೆ ಪಾಕ್ ಪ್ರಧಾನಿ ಶಹಬಾಜ್ ಶರೀಫ್ ಎಚ್ಚರಿಕೆ

ಸಿಂಧೂ ನದಿ ನೀರು: ಭಾರತಕ್ಕೆ ಪಾಕ್ ಪ್ರಧಾನಿ ಶಹಬಾಜ್ ಶರೀಫ್ ಎಚ್ಚರಿಕೆ

ಇಸ್ಲಾಮಾಬಾದ್: ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ ಶಹಬಾಜ್ ಶರೀಫ್, ಭಾರತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಪಾಲಿನ ಸಿಂಧೂ ನದಿಯ ಒಂದು ಹನಿ ನೀರನ್ನು ಸಹ ಭಾರತದೊಂದಿಗೆ ಹಂಚಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನ ಎಂದಿಗೂ ಯುದ್ಧವನ್ನು ಬಯಸುವುದಿಲ್ಲ, ಆದರೆ ಭಾರತ ತಮ್ಮ ದೇಶವನ್ನು ಶಾಂತಿಯಿಂದ ಇರಲು ಬಿಡುತ್ತಿಲ್ಲ ಎಂದು ಶರೀಫ್ ಆರೋಪಿಸಿದ್ದಾರೆ. ಭಾರತವು ಸಿಂಧೂ ನದಿ ವಿಚಾರದಲ್ಲಿ ಅನಗತ್ಯವಾಗಿ ಮಧ್ಯಪ್ರವೇಶಿಸಬಾರದು; ಒಂದು ವೇಳೆ ನಿಯಮಗಳನ್ನು ಮೀರಿ ಯಾವುದೇ ಕ್ರಮ ಕೈಗೊಂಡರೆ ಪರಿಸ್ಥಿತಿ ಕೈಮೀರಿ ಹೋಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಭಾರತವು ಎಂದಿಗೂ ಶಾಂತಿಯನ್ನು ಬಯಸುವುದಿಲ್ಲ ಮತ್ತು ಇಲ್ಲಿಯವರೆಗೆ ನಡೆದುಕೊಂಡು ಬಂದಿರುವ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಮುರಿಯಲು ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಇದರಿಂದ ಪಾಕಿಸ್ತಾನಕ್ಕೆ ದೊಡ್ಡ ಮಟ್ಟದ ಅನ್ಯಾಯವಾಗಲಿದ್ದು, ಅದನ್ನು ಖಂಡಿತವಾಗಿಯೂ ಸಹಿಸುವುದಿಲ್ಲ. ತಮ್ಮ ದೇಶದ ನೀರಿನ ಹಕ್ಕನ್ನು ಪಡೆದುಕೊಳ್ಳಲು ಮತ್ತು ರಕ್ಷಿಸಲು ಯಾವುದೇ ಮಟ್ಟಕ್ಕಾದರೂ ಇಳಿಯಲು ಸಿದ್ಧವೆಂದು ಶರೀಫ್ ಹೇಳಿದ್ದಾರೆ.

Category
ಕರಾವಳಿ ತರಂಗಿಣಿ