image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

'ಟಾಕ್ಸಿಕ್' ಜಾಗತಿಕ ಕ್ರೇಜ್: ವಿದೇಶಗಳಲ್ಲಿ ಮುಂಗಡ ಬುಕಿಂಗ್ ದಾಖಲೆ ಬರೆದ ಯಶ್ ಸಿನಿಮಾ

'ಟಾಕ್ಸಿಕ್' ಜಾಗತಿಕ ಕ್ರೇಜ್: ವಿದೇಶಗಳಲ್ಲಿ ಮುಂಗಡ ಬುಕಿಂಗ್ ದಾಖಲೆ ಬರೆದ ಯಶ್ ಸಿನಿಮಾ

ಹೈದರಬಾದ್ : 'ಕೆಜಿಎಫ್' ಸರಣಿಯ ಬೃಹತ್ ಯಶಸ್ಸಿನ ಬಳಿಕ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಆಗಸ್ಟ್ 26ರಂದು ಜಾಗತಿಕವಾಗಿ ಬೆಳ್ಳಿಪರದೆಗೆ ಅಪ್ಪಳಿಸಲಿರುವ ಈ ಚಿತ್ರವು ಬಿಡುಗಡೆಗೂ ಮುನ್ನವೇ ವಿದೇಶಿ ಮಾರುಕಟ್ಟೆಯಲ್ಲಿ ಭರ್ಜರಿ ಪ್ರಭಾವ ಬೀರಿದ್ದು, ಅಮೆರಿಕದಲ್ಲಿ ಮುಂಗಡ ಬುಕಿಂಗ್‌ನಲ್ಲಿ ಹೊಸ ದಾಖಲೆ ಬರೆದಿದೆ.

ಅಮೆರಿಕ ಮಾತ್ರವಲ್ಲದೆ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ದೇಶಗಳಲ್ಲೂ 'ಟಾಕ್ಸಿಕ್' ಸಿನಿಮಾಗೆ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ. ವಿದೇಶಗಳಲ್ಲಿ ಅಡ್ವಾನ್ಸ್ ಬುಕಿಂಗ್ ಆರಂಭವಾಗುತ್ತಿದ್ದಂತೆಯೇ ಟಿಕೆಟ್‌ಗಳು ತ್ವರಿತವಾಗಿ ಮಾರಾಟವಾಗುತ್ತಿದ್ದು, ಜಾಗತಿಕ ಮಟ್ಟದಲ್ಲಿ ಭಾರತೀಯ ಮೂಲದ ಪ್ರೇಕ್ಷಕರು ಮತ್ತು ವಿದೇಶಿ ಸಿನಿಪ್ರಿಯರು ಯಶ್ ಅವರ ಹೊಸ ಅವತಾರವನ್ನು ಕಣ್ಣುಂಬಿಕೊಳ್ಳಲು ಕಾತುರರಾಗಿದ್ದಾರೆ. 'ಕೆಜಿಎಫ್' ಮೂಲಕ ಭಾರತದಾದ್ಯಂತ ಅಪಾರ ಅಭಿಮಾನಿ ಬಳಗ ಸಂಪಾದಿಸಿರುವ ಯಶ್, ಇದೀಗ 'ಟಾಕ್ಸಿಕ್' ಮೂಲಕ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮುತ್ತಿದ್ದಾರೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸಿವೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಂಡಿರುವ ಈ ಸಿನಿಮಾ, ಹಿಂದಿ, ತಮಿಳು ಹಾಗೂ ತೆಲುಗು ಸೇರಿದಂತೆ ಪ್ರಮುಖ ಭಾರತೀಯ ಭಾಷೆಗಳಲ್ಲಿ ಜಾಗತಿಕ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಕಿಯಾರಾ ಅಡ್ವಾಣಿ, ನಯನತಾರಾ ಹಾಗೂ ಹುಮಾ ಕುರೇಷಿ ಸೇರಿದಂತೆ ದೊಡ್ಡ ತಾರಾಗಣ ಹೊಂದಿರುವ ಈ ಚಿತ್ರವು ಈಗಾಗಲೇ ಬಿಡುಗಡೆಯಾಗಿರುವ ಟೀಸರ್, ಟ್ರೇಲರ್ ಮತ್ತು ಹಾಡುಗಳ ಮೂಲಕ ಭಾರಿ ಕುತೂಹಲ ಮೂಡಿಸಿದ್ದು, ಅಂತಾರಾಷ್ಟ್ರೀಯ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದೆ.

Category
ಕರಾವಳಿ ತರಂಗಿಣಿ