image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬರಗೂರು ರಾಮಚಂದ್ರಪ್ಪ ನಿರ್ದೇಶನದ ಮಹಾಕವಿ ಸಿನಿಮಾ ಇದೇ ತಿಂಗಳು 18ರಂದು ರಾಜ್ಯಾದ್ಯಂತ ಬಿಡುಗಡೆ

ಬರಗೂರು ರಾಮಚಂದ್ರಪ್ಪ ನಿರ್ದೇಶನದ ಮಹಾಕವಿ ಸಿನಿಮಾ ಇದೇ ತಿಂಗಳು 18ರಂದು ರಾಜ್ಯಾದ್ಯಂತ ಬಿಡುಗಡೆ

ಬೆಳಗಾವಿಯ ಪ್ರಭು ಯತ್ನಟ್ಟಿಯವರು ತಮ್ಮ ಪಿ.ಆರ್. ಅಸೋಸಿಯೇಟ್ಸ್ ಸಂಸ್ಥೆಯಿಂದ ನಿರ್ಮಾಣ ಮಾಡಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶನ ಮಾಡಿರುವ ಮಹಾಕವಿ ಕನ್ನಡ ಸಿನಿಮಾ ಇದೇ ತಿಂಗಳು 18 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಆದಿಕವಿ ಪಂಪನ ಎರಡು ಕಾವ್ಯಗಳನ್ನು ಆಧರಿಸಿ ನಿರ್ಮಿಸಲಾಗಿರುವ ಈ ಚಿತ್ರದಲ್ಲಿ ಪಂಪ ಮಹಾಕವಿಯ ಜೀವನ ಮತ್ತು ಆಶಯಗಳನ್ನು ಅಳವಡಿಸಲಾಗಿದೆ. ಕನ್ನಡ ಸಾಹಿತ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಜಾತಿ ಪದ್ಧತಿಯನ್ನು ವಿರೋಧಿಸಿದ ಪಂಪನ `ಮನುಷ್ಯ ಜಾತಿ ತಾನೊಂದೆ ವಲಂ' ಎಂಬ ಮಾತು ಸಾರ್ವಕಾಲಿಕ ಸಂದೇಶವಾಗಿದ್ದು, ರಾಜನ ಆಸ್ಥಾನದಲ್ಲಿದ್ದೂ ತನ್ನ ಸೃಜನಶೀಲ ಸ್ವಾತಂತ್ರ್ಯವನ್ನು ಕಾಪಾಡಿಕೊಂಡ ಕವಿಯ ಹೆಗ್ಗಳಿಕೆಯನ್ನು ಚಿತ್ರದಲ್ಲಿ ಬಿಂಬಿಸಲಾಗಿದೆ.

ಈ ಸಿನಿಮಾದಲ್ಲಿ ಪಂಪನ ಆದಿಪುರಾಣ'ದ ಭರತ-ಬಾಹುಬಲಿ ಪ್ರಸಂಗ ಮತ್ತು ವಿಕ್ರಮಾರ್ಜುನ ವಿಜಯಂ'ನ ಕರ್ಣನ ಸನ್ನಿವೇಶಗಳನ್ನು ಪ್ರಮುಖವಾಗಿ ತೋರಿಸಲಾಗಿದ್ದು, ನಾಡಿನ ಹೆಮ್ಮೆಯ ಕನ್ನಡ ಸಾಹಿತ್ಯ ಸಂಸ್ಕೃತಿಯನ್ನು ಬಿಂಬಿಸುವ ಅಪರೂಪದ ಪ್ರಯತ್ನ ಮಾಡಲಾಗಿದೆ. ಚಿತ್ರದಲ್ಲಿ ಕಿಶೋರ್ ಕುಮಾರ್, ಅನುಷಾ ರೈ, ಸುಂದರರಾಜ್, ಪ್ರಮೀಳಾ ಜೋಷಾಯ್, ಕುಮಾರ್ ಗೊವಿಂದ್, ಶೀಲಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ ಹಾಗೂ ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ವಿಶೇಷವೆಂದರೆ, ಇದು ಬರಗೂರು ರಾಮಚಂದ್ರಪ್ಪನವರ ನಿರ್ದೇಶನದ 25ನೇ ಸಿನಿಮಾವಾಗಿದೆ.

Category
ಕರಾವಳಿ ತರಂಗಿಣಿ