image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಗುರುನಂದನ್ ಅಭಿನಯದ MR ಜಾಕ್ ಚಿತ್ರದ ಮೊದಲ ಹಾಡು ಬಿಡುಗಡೆ

ಗುರುನಂದನ್ ಅಭಿನಯದ MR ಜಾಕ್ ಚಿತ್ರದ ಮೊದಲ ಹಾಡು ಬಿಡುಗಡೆ

"ಫಸ್ಟ್ rank ರಾಜು" ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಾಯಕ ಗುರುನಂದನ್ ಅಭಿನಯದ, ಸುಮಂತ್ ಗೌಡ ನಿರ್ದೇಶನದ ಹಾಗೂ ಮಂಡಿಮನೆ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ "MR ಜಾಕ್" ಚಿತ್ರದ ಮೊದಲ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಅಧಿಕೃತವಾಗಿ ಬಿಡುಗಡೆಗೊಂಡಿದೆ.

ನಿರ್ದೇಶಕ ಸುಮಂತ್ ಗೌಡ ಬರೆದಿರುವ ಈ ನಾಯಕನ ಪರಿಚಯದ ಗೀತೆಗೆ ಹೆಸರಾಂತ ಗಾಯಕ ಎಂ.ಸಿ.ಬಿಜ್ಜು ಧ್ವನಿಯಾಗಿದ್ದು, ಕಿರಣ್ ರವೀಂದ್ರನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಸಂಗೀತಪ್ರಿಯರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಯೂಟ್ಯೂಬ್‌ನಲ್ಲಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಚಿತ್ರದಲ್ಲಿ ಹಾಸ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದ್ದು, ಇದರೊಂದಿಗೆ ಭಾವುಕ (ಎಮೋಷನ್) ದೃಶ್ಯಗಳು ಹಾಗೂ ಇಂದಿನ ಪ್ರೇಕ್ಷಕರು ಬಯಸುವ ಮನರಂಜನಾ ಅಂಶಗಳು ಸಮೃದ್ಧವಾಗಿವೆ. ಗುರುನಂದನ್ ಅವರಿಗೆ ಜೋಡಿಯಾಗಿ ತಪಸ್ವಿನಿ ಪೂಣಚ್ಛ ನಾಯಕಿಯಾಗಿ ಅಭಿನಯಿಸಿದ್ದು, ತಾರಾಬಳಗದಲ್ಲಿ ಮಿತ್ರ, ಗೋಪಾಲಕೃಷ್ಣ ದೇಶಪಾಂಡೆ, ಅರವಿಂದ್, ಧರ್ಮಣ್ಣ ಮತ್ತು ಸುಶ್ಮಿತ ಜಗ್ಗಪ್ಪ ಮುಂತಾದವರಿದ್ದಾರೆ. ಶಿವಸೇನ ಛಾಯಾಗ್ರಾಹಕರಾಗಿ ಮತ್ತು ವಿಜಯ್ ರಾಜ್ ಸಂಕಲನಕಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ಗೆಯೂ ಉತ್ತಮ ಪ್ರಶಂಸೆ ವ್ಯಕ್ತವಾಗಿದ್ದು, ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಚಿತ್ರವನ್ನು ಭರ್ಜರಿಯಾಗಿ ತೆರೆಗೆ ತರಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ.

Category
ಕರಾವಳಿ ತರಂಗಿಣಿ