image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರೂಪೇಶ್ ಶೆಟ್ಟಿ ನಿರ್ದೇಶನದ ಜೈ ತುಳು ಸಿನಿಮಾಕ್ಕೆ ಮುಹೂರ್ತ: ಒಂದೇ ಹಂತದಲ್ಲಿ ಚಿತ್ರೀಕರಣ

ರೂಪೇಶ್ ಶೆಟ್ಟಿ ನಿರ್ದೇಶನದ ಜೈ ತುಳು ಸಿನಿಮಾಕ್ಕೆ ಮುಹೂರ್ತ: ಒಂದೇ ಹಂತದಲ್ಲಿ ಚಿತ್ರೀಕರಣ

ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು.  ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ತಾರಾನಾಥ ಶೆಟ್ಟಿ ಬೋಳಾರ್, ಮಂಜುನಾಥ ಅತ್ತಾವರ, ಬಾಳ ಜಗನ್ನಾಥ ಶೆಟ್ಟಿ, ನವೀನ್ ಶೆಟ್ಟಿ ಆರ್ಯನ್ಸ್  ಮೊದಲಾದವರು ಉಪಸ್ಥಿತರಿದ್ದರು. 

ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ. 

 ರೂಪೇಶ್ ಶೆಟ್ಟಿ ಸಿನಿಮಾದ  ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ.ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ  ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್. 

"'ಜೈ ಸಿನಿಮಾದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್,  ಮೊದಲಾದವರು ಅಭಿನಯಿಸಲಿದ್ದಾರೆ.

ಸಿನಿಮಾಕ್ಕೆ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಟ, ನಿರ್ದೇಶಕ ರೂಪೇಶ್ ಶೆಟ್ಟಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ