image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ: ಪಿ. ಆರ್. ರಾಮದಾಸ ನಾಯ್ಡು ಅವರಿಂದ ಧ್ವಜಾರೋಹಣ

ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ: ಪಿ. ಆರ್. ರಾಮದಾಸ ನಾಯ್ಡು ಅವರಿಂದ ಧ್ವಜಾರೋಹಣ

ಬೆಂಗಳೂರು: ದಿಗ್ಗಜ ನಿರ್ದೇಶಕ ಎಸ್‌. ಆರ್. ಪುಟ್ಟಣ್ಣ ಕಣಗಾಲ್ ಹಾಗೂ ಹಿರಿಯ ನಿರ್ದೇಶಕರ ಸಾರಥ್ಯದಲ್ಲಿ 1984ರಲ್ಲಿ ಸಂಸ್ಥಾಪನೆಯಾದ ‘ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ’ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮ ಮತ್ತು ಅದ್ದೂರಿಯಾಗಿ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಎನ್‌ಆರ್. ಕೆ. ವಿಶ್ವನಾಥ್ ಅವರ ನೇತೃತ್ವದಲ್ಲಿ ನಡೆದ ಈ ಆಚರಣೆಯಲ್ಲಿ ಚಿತ್ರರಂಗದ ಪ್ರಮುಖ ಗಣ್ಯರು ಹಾಗೂ ಸಂಘದ ಸದಸ್ಯರು ಭಾಗವಹಿಸಿ ಸಂಭ್ರಮಿಸಿದರು.

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುನ್ನತ ‘ಸ್ವರ್ಣಕಮಲ’ ಪ್ರಶಸ್ತಿ ಸೇರಿದಂತೆ ಅನೇಕ ರಾಷ್ಟ್ರ ಮತ್ತು ರಾಜ್ಯಮಟ್ಟದ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿರುವ ಹಿರಿಯ ಚಲನಚಿತ್ರ ನಿರ್ದೇಶಕರು, ಬರಹಗಾರರು ಹಾಗೂ ನಿರ್ಮಾಪಕರಾದ ಪಿ. ಆರ್. ರಾಮದಾಸ ನಾಯ್ಡು ಅವರು ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿ, ಕನ್ನಡ ಚಿತ್ರರಂಗದ ಏಳಿಗೆಗಾಗಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಚಿತ್ರರಂಗದ ಗಣ್ಯರಾದ ಚಿಂದೋಡಿ ಬಂಗಾರೇಶ್, ಟಿ. ಜನಾರ್ಧನ್, ಗುರುಪ್ರಸಾದ್ ಪತ್ತಿ, ಅಂಚೆಹಳ್ಳಿ ಶಿವಕುಮಾರ್, ಅವಿನಾಶ್ ಶೆಟ್ಟಿ, ನಿತ್ಯಾನಂದ ಪ್ರಭು ಹಾಗೂ ಆರ್. ವಿಜಯ ಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಕೋರಿದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಂಘದ ಕಾರ್ಯದರ್ಶಿಗಳಾದ ಜಿತೇಂದ್ರ ಜೋಸೈಮನ್, ಖಜಾಂಚಿಗಳಾದ ಆದಿತ್ಯ ಚಿಕ್ಕಣ್ಣ, ಕಾರ್ಯಕಾರಿ ಸಮಿತಿ ಸದಸ್ಯರಾದ ಎಸ್‌. ಆರ್. ಪ್ರಮೋದ್, ಆರ್. ಶಿವಶಂಕರ್, ಅನುತೇಜ ರಮೇಶ್, ನಟರಾಜ್, ಶ್ರೀನಿವಾಸ ಮೂರ್ತಿ ಸೇರಿದಂತೆ ಹಲವು ಪ್ರಮುಖರು ಈ ಕಾರ್ಯಕ್ರಮದಲ್ಲಿ ಹಾಜರಿದ್ದು, ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದರು.

Category
ಕರಾವಳಿ ತರಂಗಿಣಿ