ಬೆಂಗಳೂರು: ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣಕ್ಕಾಗಿ ಸೆಟ್ ಹಾಕಲು ಅನೇಕ ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ ಎದುರಾಗಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸುದ್ದಿಗೋಷ್ಠಿ ನಡೆಸಿ, ಮರಗಳನ್ನು ಕಡಿಯುವ ಮೂಲಕ ಕಾನೂನು ಉಲ್ಲಂಘನೆ ಆಗಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.
ರಾಕಿಂಗ್ ಸ್ಟಾರ್’ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಮಾಡುತ್ತಿದ್ದಾರೆ. ಈ ಚಿತ್ರದ ಸೆಟ್ ನಿರ್ಮಾಣ ಮಾಡಲು ಮರಗಳಿಗೆ ಕೊಡಲಿ ಏಟು ಹಾಕಲಾಗಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಹೆಚ್ಎಂಟಿ ತನ್ನ ವಶದಲ್ಲಿದ್ದ ಜಮೀನನ್ನು ಮಾರಾಟ ಮಾಡಿದೆ.
ಮರ, ಗಿಡ ಎಲ್ಲಾ ಕಡಿದು ಸಿನಿಮಾ ಚಿತ್ರೀಕರಣಕ್ಕೆ ಬಾಡಿಗೆ ಕೊಟ್ಟು, ದುಡ್ಡು ಮಾಡ್ತಿದ್ದಾರೆ. ಎಲ್ಲಾ ರೀತಿಯ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಈಶ್ವರ ಖಂಡ್ರೆ ಅವರು ಹೇಳಿದ್ದಾರೆ.
ಟಾಕ್ಸಿಕ್ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ನಾನು ಖುದ್ದು ಹೋಗಿ ನೋಡಿದ್ದೇನೆ. ಅಲ್ಲಿನ ಸಂಪೂರ್ಣ ಚಿತ್ರಣ ಬದಲಾಗಿದೆ. ಏರಿಯಲ್ ಸರ್ವೇಯಲ್ಲಿ ಕಾಣಿಸಿದೆ.
ಇದು ಬಿಬಿಎಂಪಿ ವ್ಯಾಪ್ತಿಗೆ ಬರಲಿದ್ದು, ಕಾನೂನು ಕ್ರಮಕ್ಕೆ ಪಾಲಿಕೆಗೂ ಪತ್ರ ಬರೆದಿದ್ದೇನೆ. ಕಾಯ್ದೆ 24ರಡಿ ಕೇಸ್ ದಾಖಲಿಸಲು ಅವಕಾಶ ಇದೆ. ಈಗಿನ ಪರಿಸ್ಥಿತಿ ತರಿಸಿಕೊಂಡಿದ್ದೇವೆ. ಹಿಂದಿನ ಜಾಗದ ಬಗ್ಗೆಯೂ ಮಾಹಿತಿ ಪಡೆದಿದ್ದೇವೆ. ಜಾಗ ಹೆಚ್ಎಂಟಿ ವಶದಲ್ಲಿ ಇಲ್ಲ’ ಎಂದಿದ್ದಾರೆ.