image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌: ಮದ್ಯಂತರ ಜಾಮೀನು ವಿಸ್ತರಣೆ

ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌: ಮದ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್‌ ನೀಡಿದ್ದು, ಕೋರ್ಟ್ ಆದೇಶ ನೀಡುವವರೆಗೂ ದರ್ಶನ್ ಅವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಮಧ್ಯಂತರ ಜಾಮೀನು ವಜಾಗೊಳಿಸುವಂತೆ ಎಸ್‌ಪಿಪಿ ಪ್ರತಿವಾದ ಮಂಡಿಸಿದರು. ಕೊಲೆ ಪ್ರಕರಣದ ಸಾಕ್ಷಗಳ ಹೇಳಿಕೆಯನ್ನು ಕೋರ್ಟ್‌ಗೆ ಓದಿ ಹೇಳಿದ್ದಾರೆ. ಈ ನಡುವೆ ಕೋರ್ಟ್ ಮದ್ಯಂತರ ಜಾಮೀನು ವಿಸ್ತರಿಸಿತು.

Category
ಕರಾವಳಿ ತರಂಗಿಣಿ