ಡಾ. ಶಿವರಾಜ್‌ಕುಮಾರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಮತ್ತು ಕುಟುಂಬದವರು ಹೇಳಿದ್ದಾರೆ. ಈ ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಡಾ. ಶಿವರಾಜ್‌ಕುಮಾರ್ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿತ್ತು ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. ಅವರ ಸುಗಮ ಚೇತರಿಕೆಯನ್ನು ಖಚಿತಪಡಿಸಲು ಅವರು ಪ್ರಸ್ತುತ ತೀವ್ರ ನಿರೀಕ್ಷಣೆಯಲ್ಲಿದ್ದಾರೆ ಮತ್ತು ಪರಿಣತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ತಂಡದಿಂದ ಅತ್ಯುತ್ತಮ ಆರೈಕೆ ಮತ್ತು ಗಮನವನ್ನು ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.