ಮುಂಬೈ: ಮರಾಠಿ ಚಿತ್ರರಂಗದ ಖ್ಯಾತ ನಟಿ ಊರ್ಮಿಳಾ ಕಾನೇಟ್ಕರ್ ಕಾರು ಹರಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
ಕಂಡಿವಲಿಯ ಪೊಯಿಸರ್ ಮೆಟ್ರೋ ನಿಲ್ದಾಣದ ಬಳಿ ಊರ್ಮಿಲಾ ಕೊಠಾರೆ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ನಟಿ ಉರ್ಮಿಳಾ ಕೊಠಾರೆ ಚಿತ್ರೀಕರಣ ಮುಗಿಸಿ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದ್ದು, ಮೆಟ್ರೋ ರೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ನಟಿಯ ಕಾರು ಡಿಕ್ಕಿ ಹೊಡೆದಿದೆ. ನಟಿಯ ಕಾರು ಅತಿವೇಗದಲ್ಲಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಪರಿಣಾಮ ಮೆಟ್ರೋ ರೈಲಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ನಟಿ ಉರ್ಮಿಳಾ ಹಾಗೂ ಚಾಲಕ ಕೂಡ ಗಾಯಗೊಂಡಿದ್ದಾರೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಊರ್ಮಿಲಾ ಕೊಠಾರೆ ಮರಾಠಿಯ ದುನಿಯಾದಾರಿ, ಹಿಂದಿಯ ಥ್ಯಾಂಕ್ ಗಾಡ್, ಶುಭಮಂಗಲ್ ಸಾವಧಾನ್ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ.