image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ರೇಮಿಗಳ ದಿನದಂದು ಬಿಡುಗಡೆಯಾಗಲಿದೆ ಗುರುನಂದನ್ ಅಭಿನಯದ ರಾಜು ಜೇಮ್ಸ್ ಬಾಂಡ್...!

ಪ್ರೇಮಿಗಳ ದಿನದಂದು ಬಿಡುಗಡೆಯಾಗಲಿದೆ ಗುರುನಂದನ್ ಅಭಿನಯದ ರಾಜು ಜೇಮ್ಸ್ ಬಾಂಡ್...!

ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ  “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕನಾಗಿ ನಟಿಸಿರುವ, ಅತ್ಯಂತ ನಿರೀಕ್ಷಿತ ಸಿನಿಮಾ “ರಾಜು ಜೇಮ್ಸ್ ಬಾಂಡ್ " ಚಿತ್ರದ ಬಿಡುಗಡೆ ದಿನಾಂಕ ಹೊಸವರ್ಷದ ಮೊದಲ ದಿನದಂದು ಘೋಷಣೆಯಾಗಿದೆ. ನಗುವೇ ಪ್ರಾಧಾನವಾಗಿರುವ ಈ ಚಿತ್ರ ಫೆಬ್ರವರಿ 14, ಪ್ರೇಮಿಗಳ ದಿನದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸದ್ಯದಲ್ಲೇ ಚಿತ್ರದ ಮನಮೋಹಕ ಹಾಡೊಂದು ಸಹ ಅನಾವರಣವಾಗಲಿದೆ.

ಮೊದಲು ಹೇಳಿದಂತೆ ಡಿಸೆಂಬರ್ 27 ರಂದು ಈ ಚಿತ್ರ ತೆರೆಗೆ ಬರಬೇಕಿತ್ತು. ಆದರೆ "UI" ಹಾಗೂ "ಮ್ಯಾಕ್ಸ್" ಚಿತ್ರಗಳು ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆಯಾದ ಕಾರಣ ನಮ್ಮ ಚಿತ್ರದ ಬಿಡುಗಡೆಯನ್ನು ಸ್ವಲ್ಪ ಮುಂದೆ ಹಾಕಿರುವುದಾಗಿ ತಿಳಿಸಿದ್ದ  ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ  ಹಾಗೂ ಕಿರಣ್ ಭರ್ತೂರು ಫೆಬ್ರವರಿ 14 ರಂದು ಈ ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದಾಗಿ ಹೇಳಿದ್ದಾರೆ.

 ಗುರುನಂದನ್ ಈ ಚಿತ್ರದ ನಾಯಕರಾಗಿ ನಟಿಸಿದ್ದು,  ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Category
ಕರಾವಳಿ ತರಂಗಿಣಿ