image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ 'ವೀರ ಕಂಬಳ' ಚಿತ್ರಕ್ಕೆ ಖ್ಯಾತ ಗಾಯಕ ಕೈಲಾಶ್ ಖೇರ್ ಸ್ವರ

ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ 'ವೀರ ಕಂಬಳ' ಚಿತ್ರಕ್ಕೆ ಖ್ಯಾತ ಗಾಯಕ ಕೈಲಾಶ್ ಖೇರ್ ಸ್ವರ

ತಮ್ಮ ಅಮೋಘ ಗಾಯನದಿಂದ ವಿಶ್ವದಾದ್ಯಂತ ಪ್ರಸಿದ್ದರಾಗಿರುವ ಗಾಯಕ ಕೈಲಾಶ್ ಖೇರ್ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ಅರುಣ್ ರೈ ತೋಡಾರ್ ಅವರ ನಿರ್ಮಾಣದಲ್ಲಿ ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಮೂಡಿಬರುತ್ತಿರುವ "ವೀರ ಕಂಬಳ"(ಬಿರ್ದುದ ಕಂಬಳ) ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ಗಾಯನದ ಅನುಭವವನ್ನು ಕೈಲಾಶ್ ಖೇರ್ ತಮ್ಮ ಮಾತುಗಳ ಮೂಲಕ ಹಂಚಿಕೊಂಡಿದ್ದಾರೆ.

ದಕ್ಷಿಣ ಭಾರತದ ಪ್ರಸಿದ್ದ ಕ್ರೀಡೆ ಕಂಬಳವನ್ನು ಆಧರಿಸಿ ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲಿ ಬರುತ್ತಿರುವ ಈ ಚಿತ್ರದ ಹಾಡನ್ನು ಹಾಡುವುದಕ್ಕೆ ಬಹಳ ಸಂತೋಷವಾಗಿದೆ. ರಘು ಶಾಸ್ತ್ರಿ ಅವರು ಬರೆದಿರುವ ಈ ಹಾಡಿಗೆ ಮಣಿಕಂತ್ ಕದ್ರಿ ಸಂಗೀತ ನೀಡಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಅರುಣ್ ರೈ ತೋಡಾರ್ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಕೈಲಾಶ್ ಖೇರ್ ಹಾರೈಸಿದ್ದಾರೆ. 

ಇದೇ ಸಂದರ್ಭದಲ್ಲಿ ಈ ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಅವರ ನಿರ್ಮಾಣದ " ಜೀಟಿಗೆ" ತುಳು ಚಿತ್ರಕ್ಕೆ 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ಪ್ರಾದೇಶಿಕ ಭಾಷಾ ಸಿನಿಮಾ ಪ್ರಶಸ್ತಿ ಸಹ ಘೋಷಣೆಯಾಗಿರುವುದು ಮತ್ತೊಂದು ಖುಷಿಯ ವಿಚಾರ. 

 "ವೀರ ಕಂಬಳ" ಕ್ಕೆ  ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಆರ್ ಗಿರಿ ಛಾಯಾಗ್ರಹಣ, ಶ್ರೀನಿವಾಸ್ ಪಿ ಬಾಬು ಸಂಕಲನ, ಮದನ್ - ಹರಿಣಿ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ, ಮಾಸ್ ಮಾದ ಸಾಹಸ ನಿರ್ದೇಶನ,‌ ಚಂದ್ರಶೇಖರ ಸುವರ್ಣ ಮುಲ್ಕಿ ಕಲಾ ನಿರ್ದೇಶನ ಹಾಗೂ ಬೆನಕ ಕೊಟ್ರೇಶ್, ಅಕ್ಷತ ವಿಟ್ಲ ಅಸೋಸಿಯೇಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ರಾಜೇಶ್ ಕುಡ್ಲ.           

ಆದಿತ್ಯ, ಪ್ರಕಾಶ್ ರೈ, ರವಿಶಂಕರ್, ಶೋಭ್ ರಾಜ್, ನವೀನ್ ಪಡಿಲ್, ಗೋಪಿನಾಥ್ ಭಟ್, ರಾಧಿಕಾ ಚೇತನ್, ಅರುಣ್ ರೈ ತೋಡಾರ್, ಭೋಜರಾಜ್ ವಾಮಂಜೂರ್, ಉಷಾ ಭಂಡಾರಿ, ಮೈಮ್ ರಮೇಶ್, ಗೀತಾ ಸುರತ್ಕಲ್, ಸುರೇಶ್ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Category
ಕರಾವಳಿ ತರಂಗಿಣಿ