ಈಗಲ್ ಮೀಡಿಯಾ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಚಿತ್ರ "ಸೂತ್ರಧಾರಿ". ಇದು ನವರಸನ್ ನಿರ್ಮಾಣದ ಐದನೇ ಚಿತ್ರ. ತಮ್ಮ ಗಾಯನ ಹಾಗೂ ಸಂಗೀತ ನಿರ್ದೇಶನದ ಮೂಲಕ ಮೋಡಿ ಮಾಡಿರುವ ಚಂದನ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಇತ್ತೀಚೆಗೆ ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರವನ್ನು ನೀಡಿದ್ದು, ಈ ಚಿತ್ರ ಮೇ 9 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
ಚಂದನ್ ಶೆಟ್ಟಿಯವರೆ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಟ್ರೆಂಡಿಂಗ್ ನಲ್ಲಿದೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ ನಿರ್ದೇಶಿಸಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಹಾಗೂ ಮೋಹನ್ ಅವರ ನೃತ್ಯ ನಿರ್ದೇಶನ "ಸೂತ್ರಧಾರಿ" ಚಿತ್ರಕ್ಕಿದೆ.
ಚಂದನ್ ಶೆಟ್ಟಿಗೆ ನಾಯಕಿಯಾಗಿ ಅಪೂರ್ವ ನಟಿಸಿದ್ದು, ಸಂಜನಾ ಆನಂದ್ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ತಬಲನಾಣಿ, ಪ್ರಶಾಂತ್ ನಟನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.