image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

'ಲೈಟ್ ಹೌಸ್' ಮೆ 16ಕ್ಕೆ ತೆರೆಗೆ...

'ಲೈಟ್ ಹೌಸ್' ಮೆ 16ಕ್ಕೆ ತೆರೆಗೆ...

ಮಂಗಳೂರು: ಅಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಮ್ಚೆ ಕ್ರಿಯೇಶನ್ಸ್ ಬ್ಯಾನ‌ರ್ ಅಡಿಯಲ್ಲಿ  ಶ್ರೀ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು ಇವರ ನಿರ್ಮಾಣದಲ್ಲಿ ಸಂದೀಪ್ ಕಾಮತ್ ಅಜೆಕಾರು ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ "ಲೈಟ್ ಹೌಸ್” ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲು ಸಜ್ಜಾಗಿದೆ. ಕರಾವಳಿ ಭಾಗದಕಲೆ-ಸಂಸ್ಕೃತಿ-ಆಚಾರ-ವಿಚಾರಗಳನ್ನು ಬಹಳ ಸುಂದರವಾಗಿ ಸಿನೆಮಾದಲ್ಲಿ ತೋಸಿಸಲಾಗಿದ್ದು, ಚಿತ್ರದ ಬಹುತೇಕ ಎಲ್ಲಾ ಚಿತ್ರೀಕರಣವನ್ನು ಉಡುಪಿಯಲ್ಲಿ ನಡೆಸಲಾಗಿದೆ. ಕರಾವಳಿಯ ಸೌಂದರ್ಯವನ್ನು ಸಿನೆಮಾದಲ್ಲಿ ಸೆರೆಹಿಡಿಯಲಾಗಿದೆ ಎಂದು ಚಿತ್ರದ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

“ಲೈಟ್ ಹೌಸ್" ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಇಡೀ ಸಂಸಾರ ಮಕ್ಕಳ ಜೊತೆ ಕೂತು ನೋಡುವ ಸಿನೆಮಾ ಇದಾಗಿದೆ. ಪ್ರಸ್ತುತ ಕನ್ನಡ ಮಾದ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು, ನೇತ್ರದಾನದ ಮಹತ್ವ ಹಾಗೂ ಕರಾವಳಿಯ ಕಲೆ-ಸಂಸ್ಕೃತಿಯನ್ನು ಸಮಾಜಕ್ಕೆ ತೋರಿಸುವ ಕಥೆ ಈ ಚಿತ್ರದಲ್ಲಿದೆ. ನಾನು ಒಬ್ಬ ಶಿಕ್ಷಕಿ ಪಾತ್ರ ಮಾಡಿದ್ದೇನೆ ಎಂದು ನಟಿ ಶೈಲಶ್ರಿ ಮುಲ್ಕಿಯವರು ತಿಳಿಸಿದ್ದಾರೆ.  ಈ ಚಿತ್ರದಲ್ಲಿ 50 ಕ್ಕೂ ಹೆಚ್ಚು ಮಕ್ಕಳು ನಟಿಸಿದ್ದು ಹೆಸರಾಂತ ಕಲಾವಿದರಾದ ಶೋಭರಾಜ್ ಪಾವೂರು. ಮಾನಸಿ ಸುಧೀರ್, ಪ್ರಕಾಶ್‌ ತೂಮಿನಾಡು, ದೀಪಕ್ ರೈ ಪಾಣಾಜೆ, ಪೃಥ್ವಿ ಅಂಬ‌ರ್, ರಾಹುಲ್ ಅಮೀನ್, ಶೈಲಶ್ರೀ ಮುಲ್ಕಿ. ಶೀತಲ್ ನಾಯಕ್, ಅಚಲ್ ಜಿ ಬಂಗೇರ, ಅಪೂರ್ವ ಮಾಳ, ಚಂದ್ರಕಲಾ ರಾವ್, ತಿಮ್ಮಪ್ಪ ಕುಲಾಲ್, ನಮಿತಾ ಕಿರಣ್ ಮುಂತಾದವರು ಚಿತ್ರದ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹಾಗೂ ಕ್ಲಿಂಗ್ ಜಾನ್ಸನ್ ಇವರ ಸಾಹಿತ್ಯಕ್ಕೆ ಹೆಸರಾಂತ ಗಾಯಕರಾದ ವಿಜಯ್ ಪ್ರಕಾಶ್, ವಾಸುಕೀ ವೈಭವ್, ಪೃಥ್ವಿ ಭಟ್, ದಿಯಾ ಹೆಗ್ಡೆ ಚಿತ್ರದ ಹಾಡುಗಳಿಗೆ ಧ್ವನಿ ನೀಡಿದ್ದು, ಚಿತ್ರದ ಛಾಯಗ್ರಹಣ ಹಾಗೂ ಸಂಕಲನದ ಜವಬ್ದಾರಿಯನ್ನು ಪ್ರಜ್ವಲ್ ಸುವರ್ಣ ವಹಿಸಿಕೊಂಡಿದ್ದು, ಚಿತ್ರಕ್ಕೆ ಸಂಗೀತವನ್ನು ಕಾರ್ತಿಕ್ ಮುಲ್ಕಿ , ಉಡುಪಿ ನಮ್ಮ ಊರು ಹಾಡಿಗೆ ಗಿರಿಧರ್ ದಿವಾನ್ ಸಂಗೀತವನ್ನು ನೀಡಿರುತ್ತಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ದತ್ತಾತ್ರೇಯ ಪಾಟ್ಕರ್, ಯತೀಶ್ ಪೂಜಾರಿ ಹಾಗೂ ಪುಂಡಲಿಕ ಮರಾಟೆ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ