image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸೆ.12ಕ್ಕೆ “ರಾನಿ” ಬಿಗ್ ಬಜೆಟ್ ಕನ್ನಡ ಸಿನಿಮಾ

ಸೆ.12ಕ್ಕೆ “ರಾನಿ” ಬಿಗ್ ಬಜೆಟ್ ಕನ್ನಡ ಸಿನಿಮಾ

ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.  ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಿನಿಮಾದಲ್ಲಿ  ಕನ್ನಡತಿ ಧಾರವಾಹಿ ಖ್ಯಾತಿಯ ಕಿರಣ್ ರಾಜ್ , ಆರಾಧ್ಯ ಮೈಸೂರು, ಸಮೀಕ್ಷಾ ಮೈಸೂರು, ಅಪೂರ್ವ  ನಾಯಕಿಯರಾದರೆ, ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು ಮತ್ತಿತರ ಪ್ರಮುಖ ನಟ ನಟಿಯರು ನಟಿಸಿದ್ದಾರೆ.  ಕಾಂತಾರ ಖ್ಯಾತಿಯ ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಕುನಾಲ್ ಗಾಂಜಾವಾಲ, ಹನ್ಸಿಕಾ ಅಯ್ಯರ್, ವಿಸ್ಮಯ ವಿನಾಯಕ್ ಸಹಿತ ಖ್ಯಾತ ಗಾಯಕರು ಹಾಡಿದ್ದಾರೆ. 92 ದಿನಗಳು ಚಿತ್ರೀಕರಣ ನಡೆದಿದ್ದು, ಇದೊಂದು ಬಿಗ್ ಬಜೆಟ್ ಚಿತ್ರವಾಗಿದ್ದು, ಸುಮಾರು 150 ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಾಯಕ ಕಿರಣ್ ರಾಜ್,  ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ನಿರ್ಮಾಪಕರಾದ ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ